‘ಒಕ್ಕಲಿಗ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಸಿದ್ಧತೆ

 
‘ಒಕ್ಕಲಿಗ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಸಿದ್ಧತೆ

ಬೆಂಗಳೂರು :ರಾಜ್ಯದಲ್ಲಿ ಮರಾಠ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳು ರಚನೆಯಾದ ಬೆನ್ನಲ್ಲೇ ‘ಒಕ್ಕಲಿಗೆ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಸರ್ಕಾರ ಮುಂದಾಗಿದೆ.

ವೀರಶೈವ ಲಿಂಗಾಯತ ಅಭಿವೃದ್ಧಿ ಘೋಷಿಸುತ್ತಿದ್ದಂತೆ ಎಲ್ಲ ಜಾತಿ ನಾಯಕರು ನಮ್ಮ ಸಮುದಾಯಕ್ಕೂ ನಿಗಮ ಸ್ಥಾಪಿಸಿ ಎಂಬ ಕೂಗು ರಾಜ್ಯದಲ್ಲಿ ಎದ್ದಿತು. ಆದರೆ ಇದೀಗ ಒಕ್ಕಲಿಗೆ ಅಭಿವೃದ್ಧಿ ನಿಗಮ ರಚನೆಗೆ ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಈ ಬಗ್ಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸುಳಿವು ನೀಡಿದ್ದು, ಒಕ್ಕಲಿಗ ಸಮುದಾಯದ ಅಪೇಕ್ಷೆಯ ಮೇರೆಗೆ ಸರ್ಕಾರ ‘ಒಕ್ಕಲಿಗ ಅಭಿವೃದ್ಧಿ ನಿಗಮ’ ರಚನೆ ಮಾಡಲಿದೆ ಎಂದು ಹೇಳಿದ್ದಾರೆ.

ಯಾವುದೇ ಒಂದು ಜಾತಿ, ಜನಾಂಗದ ಅಭಿವೃದ್ಧಿಗೆ ನಿಗಮ ರಚನೆ ಆಗುತ್ತದೆ. ಈ ವಿಚಾರದಲ್ಲಿ ಜನರ ಭಾವನೆಗಳಿಗೆ ಪೂರಕವಾಗಿ ಸರ್ಕಾರ ಕೆಲಸ ಮಾಡಬೇಕಾಗುತ್ತದೆ ಎಂದರು.

From around the web

Trending Today
Featured