ಸುಪ್ರೀಂ ಕೋರ್ಟ್ ನಲ್ಲಿ ಮೊದಲ ಬಲಿ ಪಡೆದ ಕೊರೊನಾ..!

 
ಸುಪ್ರೀಂ ಕೋರ್ಟ್ ನಲ್ಲಿ ಮೊದಲ ಬಲಿ ಪಡೆದ ಕೊರೊನಾ..!

ನವದೆಹಲಿ: ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ. ಅದಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ವೈರಸ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಮೊದಲ ಬಲಿಯಾಗಿದೆ. ಕೊರೊನಾ ವೈರಸ್ ಗೆ ತುತ್ತಾಗಿದ್ದ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಬಲಿಯಾಗಿದ್ದಾರೆ. ಎಸ್ಸಿಯ ಆಡಳಿತ ವಿಭಾಗದಲ್ಲಿದ್ದ ರಾಜೇಂದ್ರ ರಾವತ್ ಮೃತ ಸಿಬ್ಬಂದಿ.

ರಾವತ್ ಅವರಿಗೆ ಸುಮಾರು 50 ವರ್ಷದ ರಾವತ್ ಅವರಿಗೆ ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ. ಇದು ದೇಶದ ಉನ್ನತ ನ್ಯಾಯಾಲಯದಲ್ಲಿ ಸಂಭವಿಸಿದ ಮೊದಲ ಕೊರೋನಾ ಸಾವಾಗಿದೆ.

ಐದು ದಿನಗಳ ಹಿಂದಷ್ಟೇ ಅವರ ಕೋವಿಡ್ -19 ಪರೀಕ್ಷೆ ಪಾಸಿಟಿವ್ ಬಂದಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ಸುಪ್ರೀಂ ಕೋರ್ಟ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಗಸ್ಟ್ 19 ರವರೆಗೆ ಸುಪ್ರೀಂ ಕೋರ್ಟ್ ಗೆ ಸಂಬಂಧಿಸಿದ ಸುಮಾರು 125 ರಿಜಿಸ್ಟ್ರಿ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರು ಈ ವೈರಸ್ ಸೋಂಕಿಗೆ ಒಳಗಾಗಿದ್ದರು. ಸಾಕಷ್ಟು ಸಾರ್ವಜನಿಕ ಸಾರಿಗೆ ಸೌಲಭ್ಯಗಳ ಕೊರತೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಸುಪ್ರೀಂ ಕೋರ್ಟ್ ಕಡಿಮೆ ಸಂಖ್ಯೆಯ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ.

From around the web

Trending Today
Featured