ಪ್ರಧಾನಿ ಮೋದಿ ವಿರುದ್ಧ ನಿಂತಿದ್ದ ಮಾಜಿ ಸೈನಿಕ ತೇಜ್ ಬಹದ್ದೂರ್ ಅರ್ಜಿ ವಜಾಗೊಳಿಸಿದ ಸುಪ್ರೀಂ

 
ಪ್ರಧಾನಿ ಮೋದಿ ವಿರುದ್ಧ ನಿಂತಿದ್ದ ಮಾಜಿ ಸೈನಿಕ ತೇಜ್ ಬಹದ್ದೂರ್ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2017ರಲ್ಲಿ ಗಡಿ ಭಾಗದಲ್ಲಿ ಸೇವೆ ಸಲ್ಲಿಸುವ ಯೋಧರಿಗೆ ನೀಡಲಾಗುವ ಆಹಾರ ಕಳಪೆ ಗುಣಮಟ್ಟದ್ದಾಗಿದೆ ಎಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಕಾರಣ ಅಮಾನತ್ತಾಗಿದ್ದ ತೇಜ್ ಬಹದ್ದೂರ್ ಅವರ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಚುನಾವಣಾ ಕಣದಲ್ಲಿ ಪ್ರತಿಸ್ಪರ್ಧಿಯಾಗಿ ಮಾಜಿ ಯೋಧ ತೇಜ್ ಬಹದ್ದೂರ್ ಸ್ಪರ್ಧಿಸಿದ್ದರು. ಆದರೆ, ಚುನಾವಣಾ ಆಯೋಗ ಅವರ ನಾಮಪತ್ರವನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ತೇಜ್ ಬಹದ್ದೂರ್ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲಹಾಬಾದ್ ಹೈಕೋರ್ಟ್ನಲ್ಲಿ ಸೋಲಾದ ನಂತರ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು. ಆದರೆ, ಇಂದು ತೇಜ್ ಬಹದ್ದೂರ್ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಸೈನಿಕನ ನಾಮಪತ್ರವನ್ನು ಅಸಿಂಧು ಎಂದು ಘೋಷಿಸಿದ್ದ

ಕಳೆದ ಒಂದು ವರ್ಷದಿಂದ ವಿಚಾರಣೆಯ ಹಂತದಲ್ಲಿದ್ದಈ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. ಆದರೆ, ಇಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಎಸ್.ಬೋಪಣ್ಣ ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ತ್ರಿ ಸದಸ್ಯ ನ್ಯಾಯಪೀಠವು ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಸ್ಪಿ-ಬಿಎಸ್ಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಬಿಎಸ್ಪಿ ಯೋಧ ತೇಜ್ ಬಹದ್ದೂರ್ ಸ್ಪರ್ಧಿಸಿದ್ದರು. ಆದರೆ, ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ್ದ ದಾಖಲೆಗಳು ಸಮಪರ್ಕವಾಗಿಲ್ಲದ ಕಾರಣ ನಾಮಪತ್ರ ತಿರಸ್ಕೃತಗೊಂಡಿತ್ತು, ಗಡಿ ಭದ್ರತಾ ಪಡೆಯಿಂದ ನಿರಪೇಕ್ಷಣಾ ಪತ್ರ ಪಡೆದಿರಲಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿತ್ತು.

From around the web

Trending Today
Featured