
ಶಿವಮೊಗ್ಗ: ಜಿಲ್ಲೆಯ ಕುವೆಂಪು ವಿಮಾನ ನಿಲ್ದಾಣವನ್ನು ಇಂದು ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸಿಎಂ ಬೊಮ್ಮಾಯಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಅದ್ದೂರಿಯಾಗಿ ಸ್ವಾಗತ ಮಾಡಿದ್ದಾರೆ. ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಧಾನಿ ಮೋದಿ ಅವರನ್ನು ಆಹ್ವಾನ ಮಾಡಿದ್ದಾರೆ.

ಇನ್ನು ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹಾಡಿ ಹೊಗಳಿದ್ದಾರೆ. ಮೋದಿ ಅವರಿಂದ ಸಾಕಷ್ಟು ಅಭಿವೃದ್ಧಿಯಾಗಿದೆ, ಮೋದಿ ಪ್ರಧಾನಿ ಆದಾಗಿನಿಂದ ಶೌಚಾಲಯಗಳ ಅಭಿವೃದ್ಧಿ, ಮನೆಗಳ ಕಟ್ಟಿಸಿ ಕೊಡುವುದರಲ್ಲಿ ಸಿಕ್ಕಾಪಟ್ಟೆ ಹೆಚ್ಚಳವಾಗಿದೆ ಎಂದಿದ್ದಾರೆ.
ಇನ್ನು ಪ್ರಧಾನಿ ಮೋದಿ ಅವರಿಗೆ ಅಡಿಕೆ ಹಾರ ಹಾಕಿ, ಶಾಲು ಹೊದಿಸಿ, ಪೇಟ ಹಾಕಿ ಸಚಿವ ಈಶ್ವರಪ್ಪ, ಬಿವೈ ವಿಜಯೇಂದ್ರ ಹರತಾಳು ಹಾಲಪ್ಪ ಸೇರಿದಂತೆ ಬಿಜೆಪಿ ನಾಯಕರು ಪ್ರಧಾನಿ ಮೋದಿ ಅವರಿಗೆ ಸನ್ಮಾನ ಮಾಡಿದರು. ಬಳಿಕ ಪ್ರಧಾನಿ ಮೋದಿ ಅವರು ಕೂಡ ಪಕದಲ್ಲಿಯೇ ಇದ್ದ ಬಿಎಸ್ ಯಡಿಯೂರಪ್ಪ ಅವರಿಗೆ ಶಾಲು ಹೊದಿಸಿ, ಸನ್ಮಾನ ಮಾಡಿದರು. ಅವರಿಗೆ ಹುಟ್ಟುಹಬ್ಬದ ಶುಭ ಹಾರೈಸಿದರು.
GIPHY App Key not set. Please check settings