ಗದಗ: ನಿಮೋನಿಯಾದಿಂದ ಬಳಲುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಾನೇ ಈ ಸಾವಾಗಿದೆ ಎಂದು ಆರೋಪಿಸಲಾಗಿದೆ. ಬೆಟಗೇರಿಯ ಜರ್ಮನ್ ಆಸ್ಪತ್ರೆಯಲ್ಲಿ ಇಸ್ಮಾಯಿಲ್ ಡಂಬಳ ಸಾವನ್ನಪ್ಪಿದ್ದಾರೆ.
ಇಸ್ಮಾಯಿಲ್ ಅವರ ಸಾವಿನಿಂದ ಆಕ್ರೋಶಗೊಂಡ ಕುಟುಂಬಸ್ಥರು ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆಸ್ಪತ್ರೆಯ ಕಿಟಕಿ, ಗಾಜು ಪುಡಿ ಪುಡಿ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ರೋಗಿಯನ್ನು ನೋಡುವುದಕ್ಕೆ ಬಿಟ್ಟಿಲ್ಲ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಇಅ್ಮಾಯಿಲ್ ಅವರಿಗೆ ನ್ಯುಮೋನಿಯಾ ಆದಾಗ ಜರ್ಮನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗಾಗಿ ಐಸಿಯುನಲ್ಲಿ ದಾಖಲಿಸಿಕೊಂಡಿದ್ದರು. ಆದರೆ ಇಸ್ಮಾಯಿಲ್ ನನ್ನು ನೋಡಲು ಐಸಿಯುಗೆ ಬಿಟ್ಟಿರಲೇ ಇಲ್ಲ. ಹಣ ಪೀಕುವುದಕ್ಕಾಗಿ ಈ ರೀತಿ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಘಟನಾ ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.





GIPHY App Key not set. Please check settings