ವಿಜಯಪುರ : ನಗರದಲ್ಲಿ ಹಾಡುಹಗಲೇ ಗುಂಡಿನ ದಾಳಿ ನಡೆದಿದ್ದು, ಕಾರ್ಪೋರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ರೌಡಿ ಶೀಟರ್ ಆಗಿದ್ದ ಹೈದರ್ ನದಾಫ್ ಮೇಲೆ ಗುಂಡಿನ ದಾಳಿ ನಡೆದ ಪರಿಣಾಮ ಹೈದರ್ ನದಾಫ್ ಸ್ಥಳದಲ್ಲಿಯೇ ಮೃತಪಟ್ಟದ್ದಾರೆ.
ವಿಜಯಪುರ ನಗರದಲ್ಲಿ ಚಾಂದಪೂರ ಕಾಲೋನಿ ಬಳಿ ಇರುವ ತನ್ನ ನಿವಾಸದಿಂದ ಹೊರ ಬಂದು ಕಾರು ಹತ್ತಿತ್ತದ್ದ ವೇಳೆ ಹೈದರ್ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು, ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಹೈದರ್ ಓಡಿ ಹೋಗಿದ್ದಾರೆ, ಬೆನ್ನಟ್ಟಿದ್ದ ದುಷ್ಕರ್ಮಿಗಳು ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಎರಡು ಗುಂಡುಗಳು ಪತ್ತೆಯಾಗಿವೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವದಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೊನ್ನೆ ನಡೆದ ಪಾಲಿಕೆ ಚುನಾವಣೆಯಲ್ಲಿ ಹೈದರ್ ನದಾಫ್ ವಾರ್ಡ್ ನಂ.19 ರಿಂದ ತಮ್ಮ ಪತ್ನಿ ನಿಶಾತ್ ನದಾಫ್ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸಿ ಗೆಲುವು ಸಾಧಿಸಿದ್ದರು. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು.
ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ.





GIPHY App Key not set. Please check settings