
ಶಿವಮೊಗ್ಗ: ಇಂದು ಜಿಲ್ಲೆಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದರು. ಮಾಜಿ ಸಿಎಂ ಯಡಿಯೂರಪ್ಪ ಅವರ ಹುಟ್ಟುಹಬ್ಬವಿದ್ದ ಕಾರಣ ಇಂದೇ ವಿಮಾನ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮ ಕೂಡ ಹಮ್ಮಿಕೊಳ್ಳಲಾಗಿತ್ತು. ಇದರ ನಡುವೆ ಪ್ರಧಾನಿ ಮೋದಿ ಅವರು, ಯಡಿಯೂರಪ್ಪ ಅವರಿಗೆ ವಿಶ್ ಮಾಡಿದ ರೀತಿಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೇದಿಕೆ ಮೇಲೆ ಮಾತನಾಡುತ್ತಾ ಯಡಿಯೂರಪ್ಪ ಅವರ ಗುಣಗಾನ ಮಾಡಿದ್ರು. ಇವತ್ತು ತುಂಬಾ ವಿಶೇಷವಾದ ದಿನ. ಇಂದು ಕರ್ನಾಟಕದ ಲೋಕಪ್ರಿಯ, ಜನನಾಯಕ ಬಿಎಸ್ ಯಡಿಯೂರಪ್ಪ ಅವರ ಜನ್ಮದಿನ. ಯಡಿಯೂರಪ್ಪ ಜೀ ಬಡವರಿಗಾಗಿ, ರೈತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ್ದಾರೆ. ವಿದಾಯದ ಭಾಷಣ ಎಲ್ಲರಿಗೂ ಪ್ರೇರಣೆಯಾಗಿದೆ. ಯಡಿಯೂರಪ್ಪ ಅವರ ಜೀವನ ನಮಗೆಲ್ಲಾ ಪ್ರೇರಣೆಯಾಗಿದೆ ಎಂದು ಹಾಡಿ ಹೊಗಳಿದ್ದಾರೆ.
ಇದೆ ವೇಳೆ ಪ್ರಧಾನಿ ಮೋದಿ ಅವರು ಯಡಿಯೂರಪ್ಪ ಅವರಿಗೆ ವಿಶೇಷವಾಗಿ ವಿಶ್ ಮಾಡಿಸಿದರು. ಎಲ್ಲರೂ ನಿಮ್ಮ ಮೊಬೈಲ್ ಫ್ಲ್ಯಾಶ್ ಲೈಟ್ ಆನ್ ಮಾಡಿ ಎಂದು ಹೇಳಿ, ವಿಶೇಷವಾಗಿ ವಿಶ್ ಮಾಡಿದರು.
GIPHY App Key not set. Please check settings