ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ಹುಟ್ಟುಹಬ್ಬದ ಸಂಭ್ರಮ. 91ನೇ ವಸಂತಕ್ಕೆ ಕಾಲಿಟ್ಟಿರುವ ದೊಡ್ಡ ಗೌಡ್ರಿಗೆ ಕುಟುಂಬಸ್ಥರು, ಅಭಿಮಾನಿಗಳು, ಕಾರ್ಯಕರ್ತರು ಸೇರಿದಂತೆ ರಾಜಕೀಯ ಗಣ್ಯರು ಶುಭ ಹಾರೈಸುತ್ತಿದ್ದಾರೆ. ಇನ್ನಷ್ಟು ಆಯಸ್ಸು, ಆರೋಗ್ಯವನ್ನು ದೇವರು ಕರುಣಿಸಲಿ ಎಂದು ಶುಭಕೋರಿದ್ದಾರೆ.
ಮನೆಯಲ್ಲಿಯೇ ದೇವರಿಗೆ ಪೂಜೆ ಸಲ್ಲಿಸಿ, ಮಗ ಕುಮಾರಸ್ವಾಮಿ ಅವರು, ಮೊಮ್ಮಗ ನಿಖಿಲ್, ಮರಿ ಮೊಮ್ಮಗ ದೇವ್ ಸೇರಿದಂತೆ ಸೊಸೆಯಂದಿರೆಲ್ಲಾ ದೇವೇಗೌಡರಿಗೆ ವಿಶ್ ಮಾಡಿದ್ದಾರೆ. ಇನ್ನು ರಾಜಕೀಯ ನಾಯಕರು ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಟ್ವೀಟ್ ನಲ್ಲಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಕೋರಿದ್ದಾರೆ. “ಹಿರಿಯ ಮುತ್ಸದ್ದಿ ನಾಯಕರು. ಮಾಜಿ ಪ್ರಧಾನಮಂತ್ರಿ ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನ ಕೃಪಾರ್ಶೀವಾದ ತಮ್ಮ ಮೇಲೆ ಸದಾ ಇರಲೆಂದು ಪ್ರಾರ್ಥಿಸುತ್ತೇನೆಂದು” ಸಿಎಂ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.
ಇಂದು ಮಧ್ಯಾಹ್ನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿದೆ. ಧಾರ್ಮಿಮ ಪೂಜಾ ಕಾರ್ಯದ ಜೊತೆಗೆ ಹುಟ್ಟುಹಬ್ಬ ಆಚರಣೆ ಮಾಡಲಿದ್ದಾರೆ. ಈ ವೇಳೆ ಕುಟುಂಬಸ್ಥರು, ಕಾರ್ಯಕರ್ತರು, ಅಭಿಮಾನಿಗಳು ಇರಲಿದ್ದಾರೆ.





GIPHY App Key not set. Please check settings