Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾರೊಬ್ಬರು ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ : ಉಡುಪಿ ಘಟನೆಗೆ ಸಿಎಂ ಹೇಳಿಕೆ

Facebook
Twitter
Telegram
WhatsApp

 

ಬೆಂಗಳೂರು: ಉಡುಪಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಮಾಡಿದ ಪ್ರಕರಣದಲ್ಲಿ ಗಂಭೀರವಾದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಸಿಎಂ‌ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಸಂಬಂಧ ಎಫ್ಐಆರ್ ದಾಖಲಾಗಿದೆ. ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿಯೊಬ್ಬರು ಮಾಡುತ್ತಿದ್ದಾರೆ ಎಂದಿದ್ದಾರೆ.

ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆ ಬರುವುದಿಲ್ಲ. ತನಿಖೆಯಾಗಿ ವರದಿ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರು, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾರೊಬ್ಬರು ಕಾನೂನನ್ನು ಕೈಗೆ ತೆಗೆದುಕೊಳ್ಳುವಂತೆ ಇಲ್ಲ. ರಾಜ್ಯದ ಜನರಿಗೆ ಸುರಕ್ಷತೆ, ನೆಮ್ಮದಿಯ ಬದುಕು ಕಲ್ಪಿಸುವುದು ನಮ್ಮ ಕರ್ತವ್ಯ. ಪೊಲೀಸರಿಗೆ ಸೂಚಿಸಿದ್ದೇನೆ. ಎಂದಿದ್ದಾರೆ.

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ಮಾತನಾಡಿ, ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಸಾಮಾಜಿಕ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ಚರ್ಚಿಸಿ ತೀರ್ಮಾನ ಮಾಡುತ್ತೇವೆ. ನ್ಯಾಯಾಲಯದ ತೀರ್ಪನ್ನು ಓದಿ, ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಉದ್ಯೋಗ ವಾರ್ತೆ | ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಹುದ್ದೆಗಳ ನೇಮಕ

ಸುದ್ದಿಒನ್, ಬೆಂಗಳೂರು, ಮೇ. 24 :ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಒಟ್ಟು 902 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್ನಲ್ಲಿ ನೇಮಕ ಪ್ರಕ್ರಿಯೆ

ಉದ್ಯೋಗ ವಾರ್ತೆ | ಅತಿಥಿ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಅರ್ಜಿ

  ಚಿತ್ರದುರ್ಗ. ಮೇ.24:  ಚಿತ್ರದುರ್ಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು, ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಐಪಿಎಲ್ ನಿಂದ ಹೊರಬಿದ್ದ ಮೇಲೆ ಅಭಿಮಾನಿಗಳಿಗಾಗಿ ಪೋಸ್ಟ್ ಹಾಕಿದ ವಿರಾಟ್ ಕೊಹ್ಲಿ

  ಈ ಬಾರಿಯ ಐಪಿಎಲ್ ನಲ್ಲಿ ಆರ್ಸಿಬಿ ಟೀಂ ಆಡಿದ್ದು ನೋಡಿದ್ರೆ ಖಂಡಿತ ಕಪ್ ಗೆದ್ದು ತಂದೇ ತರುತ್ತಾರೆ ಎಂಬ ವಿಶ್ವಾಸ ಎಲ್ಲರಿಗೂ ಮೂಡಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಸೋತು,

error: Content is protected !!