
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸಚಿವ ವಿ ಸೋಮಣ್ಣ ನಡೆ ಕಾಂಗ್ರೆಸ್ ಕಡೆಗೆ ಎಂಬ ಮಾತಿತ್ತು. ಬಿಜೆಪಿಯಲ್ಲಿ ಒಂದಷ್ಟು ಮನಸ್ತಾಪವಿದೆ, ಹೀಗಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನಲಾಗ್ತಾ ಇತ್ತು. ಅದಕ್ಕೆ ತಕ್ಕಂತೆ ಡಿಕೆ ಶಿವಕುಮಾರ್ ಹಾಗೂ ಸೋಮಣ್ಣ ಜೊತೆಗಿನ ಫೋಟೋ ಬೇರೆ ವೈರಲ್ ಆಗಿತ್ತು.

ಇದೀಗ ಈ ಎಲ್ಲಾ ಊಹಾಪೋಹಗಳಿಗೂ ಖಡಕ್ ಉತ್ತರ ನೀಡಿದ್ದಾರೆ. ಪ್ರಧಾನಿ ಮೋದಿ ಹಾಗೂ ಸಿಎಂ ಬೊಮ್ಮಾಯಿ ನಾಯಕತ್ವದಲ್ಲಿ ಕೆಲಸ ಮಾಡುತ್ತಿದ್ದೇನೆ. ಮಾಜಿ ಸಿಎಂ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕೆಲಸ ಮಾಡುತ್ತೇನೆ. ನಾನು ಬಿಜೆಪಿಯ ನಾಯಕ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಹೋಗುವುದಿಲ್ಲ. ನಾನು ಎಲ್ಲಿಗೂ ಹೋಗಲ್ಲ, ಬಿಜೆಪಿಯಲ್ಲಿಯೇ ಇರುತ್ತೇನೆ ಎಂದಿದ್ದಾರೆ.
ಟಿಕೆಟ್ ಕೊಟ್ಟರೆ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದರೆ ಪಕ್ಷದ ಕೆಲಸ ಮಾಡಿಕೊಂಡು ಇರುತ್ತೇನೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವರು ಚೆನ್ನಾಗಿರಲಿ. ಇನ್ನು ಮುಂದಾದರೂ ತೇಜೋವಧೆ ಮಾಡಬೇಡಿ. ನಾನು ಬಿಜೆಪಿ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ. ಕಾಂಗ್ರೆಸ್ ನಿಂದ ಡಿಕೆಶಿ ನನ್ನನ್ನು ಸಂಪರ್ಕಿಸಿಲ್ಲ. ಕಾಂಗ್ರೆಸ್ ಗೆ ಬನ್ನಿ ಅಂತಾನು ಕರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

GIPHY App Key not set. Please check settings