ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಫೋಟೋ ವೀಡಿಯೋ ಚಿತ್ರೀಕರಣದ ಗೊಂದಲ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ನಿಷೇಧದ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ. ಆದರೆ ಸರ್ಕಾರಿ ನೌಕರರು ಬಹಳ ದಿನ ಹೇಳ್ತಿದ್ರು. ಪಾಪ ಅವ್ರು ಹೇಳೋದ್ರಲ್ಲೂ ಅರ್ಥ ಇದೆ. ಕೆಲವು ಹೆಣ್ಣು ಮಕ್ಕಳದೆಲ್ಲ ಫೋಟೋ ತೆಗೆದು, ತೊಂದರೆ ಅಗಿತ್ತು. ಹೀಗಾಗಿ ಅವರು ಅದನ್ನು ಮಾಡಿದ್ರು. ಯಾವುದನ್ನು ಮುಚ್ಚಿಡುವಂತ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ಯಾರು ಏನಾದರೂ ಹೇಳಿಕೊಳ್ಳಲಿ. ಅದರಿಂದ ಯಾವುದೇ ರೀತಿಯ ನಿರ್ಬಂಧ ಹಾಕಬಾರದು. ಮೊದಲು ಯಾವ ರೀತಿ ಇತ್ತೋ ಅದೇ ರೀತಿ ನಿಯಮ ಇರಬೇಕು ಎಂದು ತೀರ್ಮಾನ ಮಾಡಿದ್ದೇವೆ. ನಿನ್ನೆ ಇಡೀ ದಿನ ಪ್ರಮುಖರ ಜೊತೆ ಚಿಂತನಾ ಸಭೆ ಆಗಿದೆ. ಬರುವಂತ ದಿನಗಳಲ್ಲಿ ಸರ್ಕಾರ ಹಾಗೂ ಪಕ್ಷ ಯಾವ ರೀತಿ ಸಮನ್ವಯತೆ ಯಿಂದ ಹೋಗಬೇಕು ಎಂದು ಚರ್ಚೆ ಆಗಿದೆ.
ಸರ್ಕಾರದ ಯೋಜನೆ ಜನರಿಗೆ ತಲುಪಿಸುವ ಬಗ್ಗೆ ಚರ್ಚೆ ಆಗಿದೆ. ಒಂದು ವರ್ಷ ಪೂರೈಸಿದ್ದಕ್ಕೆ ದೊಡ್ಡಬಳ್ಳಾಪುರದಲ್ಲಿ ದೊಡ್ಡ ರ್ಯಾಲಿ ಮಾಡಲು ನಿರ್ಧಾರ ಮಾಡಲಾಗಿದೆ. ಬರುವಂತ ದಿನಗಳಲ್ಲಿ ವಿವಿಧ ಕ್ಷೇತ್ರ ಗಳಲ್ಲಿ ಪ್ರವಾಸ ಮಾಡ್ತೀನಿ. ದೊಡ್ಡಬಳ್ಳಾಪುರದಲ್ಲಿ ವಿಶೇಷ ರ್ಯಾಲಿ ಮಾಡಲು ತೀರ್ಮಾನ ಮಾಡಿದ್ದೇವೆ. ಸರ್ಕಾರಿ ಕಾರ್ಯಕ್ರಮ ಬೆಂಗಳೂರಲ್ಲಿ ಇರುತ್ತದೆ. ಪಕ್ಷದ ಕಾರ್ಯಕ್ರಮ ದೊಡ್ಡಬಳ್ಳಾಪುರ ದಲ್ಲಿ ಇರುತ್ತದೆ.
ಸಭೆ ನಡುವೆ ನಿನ್ನೆ ಪ್ರವಾಹ ಪೀಡಿತ ಡಿಸಿಗಳ ಜೊತೆ ಮಾತಾಡಿದ್ದೇನೆ. ಅಲ್ಲಿನ ಸ್ಥಳೀಯ ನದಿಗಳ ಪ್ರವಾಹದ ಬಗ್ಗೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಿದ್ದೇನೆ. ನದಿ ಪಾತ್ರದ ಪಕ್ಕದಲ್ಲಿ ಇರೋರ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಿದ್ದೇವೆ. ಆಶ್ರಯ ಕೇಂದ್ರ ಗಳನ್ನು ಕೂಡಲೇ ತೆರೆಯಲು ಸೂಚನೆ ನೀಡಿದ್ದೇನೆ. ಮನೆಗಳು ಬಿದ್ದಲ್ಲಿ ಕೂಡಲೇ ಪರಿಹಾರ ಕೊಡುವಂತೆ ಸೂಚನೆ. ಇದಕ್ಕೆಲ್ಲದ್ದಕ್ಮೂ ಹಣವನ್ನು ಒದಗಿಸಿದ್ದೇನೆ.
ಮೂಲಭೂತ ಸೌಕರ್ಯಕ್ಕಾಗಿ 500 ಕೋಟಿ ಒದಗಿಸಿದ್ದೇನೆ. ಮನೆಗಳನ್ನು ಕಟ್ಟಲು 3, 5 ಲಕ್ಷ ಮಾಡಿ ಹೆಚ್ಚಿಗೆ ಮಾಡಿದ್ದೇವೆ. ಕೇಂದ್ರ ಸರ್ಕಾರ ಬೆಳೆ ಪರಿಹಾರಕ್ಕಿಂತ ಹೆಚ್ಚು ಮಾಡಿದ್ದೇವೆ. ಪ್ರವಾಹದ ಸಂದರ್ಭದಲ್ಲಿ ಯಾರು ತೊಂದರೆ ಗೀಡಾಗಿದ್ದಾರೆ, ಅವರ ನೆರವಿಗೆ ಸರ್ಕಾರ ಕೂಡಲೇ ಧಾವಿಸಲಿದೆ. ಆಮೇಲೆ ಸೂಕ್ತವಾದ ಪರಿಹಾರ ವನ್ನು ಕೂಡ ನಮ್ಮ ಸರ್ಕಾರ ಕೊಡಲಿದೆ ಎಂದಿದ್ದಾರೆ.