ಬೆಂಗಳೂರು: ಪೆಟ್ರೋಲ್ – ಡಿಸೇಲ್ ದರ ದಿನೇ ದಿನೇ ಹೆಚ್ಚಾಗುತ್ತಲೇ ಇತ್ತು. ಯಾವತ್ತಿಗೆ ಕಡಿಮೆಯಾಗುತ್ತೆ ಎಂದು ವಾಹನ ಸವಾರರು ಕಾಯುತ್ತಲೇ ಇದ್ದಾರೆ. ಇವತ್ತು ಪೆಟ್ರೋಲ್ ಡಿಸೇಲ್ ಬೆಲೆಯ ದರವನ್ನು ಭಾರತೀಯ ತೈಲ ಮಾರುಕಟ್ಟೆಗಳು ರಿಲೀಸ್ ಮಾಡಿವೆ. ಆದರೆ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ದೆಹಲಿಯಲ್ಲಿ ಪೆಟ್ರೋಲ್ ಲೀಟರ್‌ಗೆ 96.72 ರೂ. ಇದ್ದು. ಡೀಸೆಲ್ ಲೀಟರ್‌ಗೆ 89.62 ರೂ ಇದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಅನ್ನು 102.63 ರೂ ಮತ್ತು ಡೀಸೆಲ್ 94.24 ರೂಪಾಯಿ ಇದೆ.
ಇನ್ನು ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂಪಾಯಿ ಇದೆ. ತೈಲ ಬೆಲೆ ಕಡಿಮೆಯಾಗುತ್ತೆ ಎಂದು ಕಾಯುತ್ತಿದ್ದರು ಕಡಿಮೆಯಾಗುವ ಲಕ್ಷಣವೇ ಕಾಣುತ್ತಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಕಚ್ಚಾ ತೈಲದ ಬೆಲೆಯಲ್ಲಿ ಕೊಂಚ ಏರಿಕೆ ಕಾಣುತ್ತಿದೆ.