ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಇ-ಮೇಲ್ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿ & ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದೆ.
ಒಟ್ಟು ಹುದ್ದೆ M & E ಆಫೀಸರ್ ನ ಮೂರು ಹುದ್ದೆಗಳು ಖಾಲಿ ಇದೆ. ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಏಪ್ರಿಲ್ 26ರೊಳಗೆ ಕಳುಹಿಸಬೇಕು.