ಚಿತ್ರದುರ್ಗ, (ಏ.07): 2023ರ ವಿಧಾನಸಭೆ ಚುನಾವಣೆಗೆ ಎಲ್ಲಾ ತಯಾರಿ ನಡೆದಿದೆ. ಇದರ ಮಧ್ಯೆ ಬಂಡಾಯವೇಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದವರಿಗೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಹಲವರು ಬಂಡಾಯವೆದ್ದಿದ್ದಾರೆ. ಇದೀಗ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಘು ಆಚಾರ್ ಈಗ ಬೇರ ಪಕ್ಷಕ್ಕೆ ಸೇರಲು ಹೊರಟಿದ್ದಾರೆ.
ಈ ಬಾರಿ ಕಾಂಗ್ರೆಸ್ ಟಿಕೆಟ್ ತಮಗೆ ಸಿಗುತ್ತದೆ ಎಂದು ಭಾವಿಸಿದ್ದರು ರಘು ಆಚಾರ್. ಆದರೆ ಟಿಕೆಟ್ ಕೈ ತಪ್ಪಿದೆ. ಇದರಿಂದ ಬೇಸರಗೊಂಡು ಕಾಂಗ್ರೆಸ್ ಬಿಟ್ಟು ಜೆಡಿಎಸ್ ಪಕ್ಷ ಸೇರಲು ಸಜ್ಜಾಗಿದ್ದಾರೆ. ಏಪ್ರಿಲ್ 14 ರಂದು ಜೆಡಿಎಸ್ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಮಿಸ್ಸಾದರೂ ಜೆಡಿಎಸ್ ನಿಂದ ಕಣಕ್ಕಿಳಿಯುವ ಎಲ್ಲಾ ಸಾಧ್ಯತೆಯೂ ಇದೆ.
ಜೆಡಿಎಸ್ ಸೇರ್ಪಡೆ ಬಗ್ಗೆ ಮಾತನಾಡಿದ ರಘು ಆಚಾರ್, ನಾನು ಅಧಿಕಾರದ ಹಿಂದೆ ಹೋದವನಲ್ಲ. ಸ್ವಾಭಿಮಾನಕ್ಕೆ ಚ್ಯುತಿಯುಂಟು ಮಾಡಿದವರಿಗೆ ತಕ್ಕ ಉತ್ತರ ನೀಡಲಿದ್ದೇನೆ. ಪೂರ್ವ ಷರತ್ತು ವಿಧಿಸದೇ ಜೆಡಿಎಸ್ ಗೆ ಸೇರುತ್ತಿದ್ದೇನೆ. ಟಿಕೆಟ್ ವಿಚಾರ ಇನ್ನೂ ತೀರ್ಮಾನವಾಗಿಲ್ಲ.
ಪಕ್ಷ ಸೇರ್ಪಡೆಯ ಬಳಿಕ ಇದು ತೀರ್ಮಾನವಾಗಲಿದೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












