ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆಗೆ ಆಕ್ರೋಶ ವ್ಯಕ್ತವಾಗಿದ್ದು, ಇದೇ ಕೋಪದಲ್ಲಿ ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿಯವರ ಮೇಲೆ ಜನ ಆಕ್ರೋಶಗೊಂಡಿದ್ದಾರೆ. ಅವರ ಮೈಮೇಲಿದ್ದ ಬಟ್ಟೆಯನ್ನೇ ಹರಿದು ಹಾಕಿ, ರಂಪಾಟ ಮಾಡಿದ್ದಾರೆ.
ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದರು. ಶವವನ್ನಿಟ್ಟು ಪ್ರತಿಭಟಿಸುತ್ತಿದ್ದ ಮಾಹಿತಿ ತಿಳಿದು ಶಾಸಕ ಎಂ ಪಿ ಕುಮಾರಸ್ವಾಮಿ ಅವರು ಸ್ಥಳಕ್ಕೆ ಬಂದಿದ್ದರು. ಶಾಸಕರನ್ನು ಪ್ರತಿಭಟನಾಕಾರರು ತರಾಟೆ ತೆಗೆದುಕೊಂಡರು. ಮುತ್ತಿಗೆ ಹಾಕಲು ಯತ್ನಿಸಿದರು.
ಇದನ್ನು ಗಮನಿಸಿದ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಮತ್ತೆ ರೊಚ್ಚಿಗೆದ್ದ ಜನ ಪೊಲೀಸ್ ಜೀಪ್ ಮೇಲೆಯೇ ಕಲ್ಲು ತೂರಾಟ ನಡೆಸಿದರು. ಬಳಿಕ ಪ್ರತಿಭಟನಾಕಾರರು ಎಂ ಪಿ ಕುಮಾರಸ್ವಾಮಿ ಅವರ ಬಟ್ಟೆಯನ್ನು ಹರಿದು ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿ ದಿನೇ ದಿನೇ ಜಾಸ್ತಿಯಾಗುತ್ತಿದೆ. ಈ ಕಾಡಾನೆ ದಾಳಿಗೆ ಮೂರು ತಿಂಗಳಲ್ಲಿ ಮೂವರು ಬಲಿಯಾಗಿದ್ದಾರೆ.
ಇನ್ನು ಈ ಸಂಬಂಧ ಹರಿದ ಬಟ್ಟೆಯಲ್ಲಿಯೇ ಮಾತನಾಡಿದ್ದು, ಇದೊಂದು ಸಂಚಿನ ಹಲ್ಲೆಯಾಗಿದೆ. ಇದು ಪೊಲೀಸರ ವೈಫಲ್ಯ ಕೂಡ ಆಗಿದೆ. ಮಿಸ್ ಗೈಡ್ ಅಂತಾಲೂ ಹೇಳಿದ್ದಾರೆ ಎಂದು ಕಿಡಿಕಾರಿದ್ದಾರೆ.