Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖರ್ಗೆ ಮೈಬಣ್ಣದ ಬಗ್ಗೆ ಆರಗ ಜ್ಞಾನೇಂದ್ರ ವ್ಯಂಗ್ಯ : ದಲಿತರ ಕ್ಷಮೆ ಕೇಳುವಂತೆ ಕಾಂಗ್ರೆಸ್ ಪಟ್ಟು..!

---Advertisement---

 

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ, ಇಂದು ಬಿಜೆಪಿ ಪ್ರತಿಭಟನೆ ನಡೆಸಿದೆ. ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಚಿವ ಆರಗ ಜ್ಞಾನೇಂದ್ರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಣ್ಣ್ ಬಗ್ಗೆಯೂ ಮಾತನಾಡಿದ್ದಾರೆ.

ಮಲೆನಾಡಿನ ಬಗ್ಗರ ಗೊತ್ತಿರದ ಆ ಕಡೆಯ ಮಿನಿಸ್ಟರ್ ಸಾಹೇಬ್ರು ಸುಟ್ಟು ಕರಕಲಾಗಿದ್ದಾರೆ. ನಮ್ಮ ಖರ್ಗೆಯವರನ್ನು ನೋಡಿದ್ರೆ ಗೊತ್ತಾಗುತ್ತದೆ‌. ಸ್ವಲ್ಪ ತಲೆ ಕೂದಲು ಮುಚ್ಚಿಕೊಂಡಿರುವುದೇ ಅವರಿಗೆ ನೆರಳಿನಂತೆ ತಿಳಿದಿರುತ್ತಾರೆ‌ ನಮ್ಮ ದುರಾದೃಷ್ಟ ಎಂದರೆ ಮಿನಿಸ್ಟರ್ ಸಾಹೇಬ್ರು ಕೂಡ ಆ ಕಡೆಯವರು. ಅವರಿಗೆ ಮರ – ಗಿಎ, ನೆರಳು ಏನಂಥ ಗೊತ್ತಿಲ್ಲ. ಸುಟ್ಟು ಕರಕಲಾಗಿರುತ್ತಾರೆ.

ನಮ್ಮ ಖರ್ಗೆಯವರನ್ನೇ ನೋಡಿದ್ರೆ ಗೊತ್ತಾಗುತ್ತದೆ. ಮಲೆನಾಡಿನ ಬದುಕಿನ ಬಗ್ಗೆ ಗೊತ್ತಿಲ್ಲ ಎಂದು ಭಾಷಣದ ವೇಳೆ ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್ ಆಕ್ರೋಶಗೊಂಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಖರ್ಗೆಯವರ ಕುರಿತು ನೀಡಿರುವ ಹೇಳಿಕೆ ಇಡೀ ಮೂಲ ನಿವಾಸಿ ದಲಿತರಿಗೆ ಮಾಡಿದ ಅವಮಾನ. ಹೀಗಾಗಿ ಆರಗ ಜ್ಞಾನೇಂದ್ರ ಅವರು, ಮಲ್ಲಿಕಾರ್ಜುನ ಖರ್ಗೆ ಹಾಗೂ ದಲಿತರ ಕ್ಷಮೆ ಕೇಳಬೇಕು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment