ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಕಾಂಗ್ರೆಸ್ ನಲ್ಲಿ ದಿನೇ ದಿನೇ ಜಾಸ್ತಿಯಾಗುತ್ತಲೆ ಇದೆ. ಕೆಲವೊಂದು ಕಡೆ ಟಿಕೆಟ್ ಆಕಾಂಕ್ಷಿಗಳು ತಾವೇ ಮುಂದಿನ ಅಭ್ಯರ್ಥಿಗಳು ಎಂಬುದಾಗಿ ಓಡಾಡುತ್ತಾರೆ. ಹೀಗಾಗಿ ಅಂಥವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಲಹೆ ನೀಡಿರುವ ಡಿಕೆ ಶಿವಕುಮಾರ್ ಅವರು, ಗುಂಪುಗಳನ್ನು ನಿರ್ಮಿಸಿಕೊಂಡು ಗುಂಪುಗಾರಿಕೆ ನಡೆಸಬಾರದು. ಗುಂಪು ಕಟ್ಟಿಕೊಂಡು ಕೆಲಸ ಮಾಡಿ ನಾವೇ ಅಭ್ಯರ್ಥಿಗಳೆಂದು ಹೇಳಬಾರದು. ಸಾರ್ವಜನಿಕವಾಗಿ ವೈಯಕ್ತಿಕ ಹೇಳಿಕೆ ನೀಡಿ ಜನರಲ್ಲಿ ಗೊಂದಲ ಮೂಡಿಸಬಾರದು ಎಂದಿದ್ದಾರೆ.
ಎಲ್ಲರೂ ಒಂದಾಗಿ ಪಕ್ಷದ ಬಲವರ್ಧನೆ ಮಾಡಬೇಕು. ಬಿಜೆಪಿ ಸರ್ಕಾರದ ವೈಫಲ್ಯವನ್ನು ಜನರಿಗೆ ಮುಟ್ಟಿಸಬೇಕು. ಪ್ರತಿಯೊಂದು ಬೂತ್ ಗೆ ತೆರಳಿ ಬಿಜೆಪಿಯ ಹಗರಣಗಳನ್ನು ಜನರಿಗೆ ಮುಟ್ಟಿಸಬೇಕು ಎಂದು ಸೂಚನೆ ನೀಡಿದ್ದಾರೆ.