Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮೂರ್ತಿ.ಎಂ. ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.11 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಸ್.ಮಧುಬಂಗಾರಪ್ಪನವರ ಆದೇಶದಂತೆ ಹೊಸದುರ್ಗ ತಾಲ್ಲೂಕು ಚಿತ್ತಯ್ಯನಹಟ್ಟಿ ಗ್ರಾಮದ ಮೂರ್ತಿ ಎಂ. ಇವರನ್ನು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್ ಕಾಂಗ್ರೆಸ್ ಕಚೇರಿಯಲ್ಲಿ ಮೂರ್ತಿ ಎಂ. ಇವರಿಗೆ ನೇಮಕಾತಿ ಪತ್ರ ನೀಡಿ ಮಾತನಾಡುತ್ತ ಪಕ್ಷದಲ್ಲಿ ಹುದ್ದೆ ಪಡೆದುಕೊಂಡು ಮನೆಯಲ್ಲಿ ಕುಳಿತುಕೊಳ್ಳಬಾರದು. ಜಿಲ್ಲೆಯಾದ್ಯಂತ ಸಂಚರಿಸಿ ಹಿಂದುಳಿದ ವರ್ಗಗಳ ವಿಭಾಗವನ್ನು ಸಂಘಟಿಸಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್ ಮಾತನಾಡಿ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಾಗುವುದರಿಂದ ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪನವರ ಶಿಫಾರಸ್ಸಿನ ಮೇರೆಗೆ ನಿಮ್ಮನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಅವರ ಮಾರ್ಗದರ್ಶನದಂತೆ ನಡೆಯಬೇಕು ಎಂದು ಹೇಳಿದರು.

ಹೊಸದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಮಾತನಾಡುತ್ತ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ಹಾಗೂ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಪರವಾಗಿ ನಿಷ್ಠೆಯಿಂದ ಕೆಲಸ ಮಾಡಿ ಕಾಂಗ್ರೆಸ್‍ಗೆ ಶಕ್ತಿ ತುಂಬಬೇಕು ಎಂದು ಮೂರ್ತಿ ಎಂ.ಗೆ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ಮೀನುಗಾರಿಕೆ ವಿಭಾಗದ ಶಶಿಕಿರಣ್, ಚಾಂದ್‍ಪೀರ್, ಹೊಸದುರ್ಗ ತಾಲ್ಲೂಕು ಕಾಡುಗೊಲ್ಲರ ಸಂಘದ ಅಧ್ಯಕ್ಷ ರವಿಕುಮಾರ್, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಈಶ್ವರ್, ಬಸವರಾಜ್, ಶಿವಣ್ಣ, ಯತೀಶ್, ಮೂರ್ತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...