ಸುದ್ದಿಒನ್, ಚಿತ್ರದುರ್ಗ, (ಮೇ.22): ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನು ಸರ್ಕಾರ ನೇಮಕ ಮಾಡಲಾಗಿತ್ತು. ಇದೀಗ ಆ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಇಂದು ನೇಮಕ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಹೈಕೋರ್ಟ್ ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಇದ್ದ ಪೀಠ ಈ ಆದೇಶ ಹೊರಡಿಸಿದೆ.
ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿತ್ತು. ಡಿಸೆಂಬರ್ 13ರಂದು ನೇಮಕ ಮಾಡಿ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ಆದೇಶ ಪ್ರಶ್ನೆ ಮಾಡಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು. ತಮ್ಮ ವಿರುದ್ಧ ಪ್ರಕರಣ ದಾಖಲಾದ ನಂತರ ಈಗಾಗಲೇ ಮುರುಘಾ ಶರಣರು ಮಠದ ವ್ಯವಹಾರಗಳಿಗೆ ಸಂಬಂಧಿಸಿದ ಜಿಪಿಎ ನೀಡಿದ್ದಾರೆ.
ಶಿಕ್ಷಣ ಸಂಸ್ಥೆಗಳಿಗೆ ನಿವೃತ್ತ ನ್ಯಾಯಾಧೀಶರಿಗೆ ಜಿಪಿಎ ನೀಡಿದ್ದಾರೆ. ಮಠದ ವ್ಯವಹಾರಗಳಿಗೆ ಬಸವಪ್ರಭು ಸ್ವಾಮಿಗೆ ಜಿಪಿಎ ನೀಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಇಂದು ಹೈಕೋರ್ಟ್ ಈ ಸಂಬಂಧ ನೇಮಕ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.