ಬೆಂಗಳೂರು: ಈ ವರ್ಷ ಯಾವುದು ಸರಿಯಾಗಲಿಲ್ಲ. ಮಳೆಗಾಲದ ಮಳೆಯಾಗಲಿಲ್ಲ, ಬೆಳೆ ಸರಿಯಾಗಿ ಬರಲಿಲ್ಲ. ಈಗ ಅಷ್ಟೊ ಇಷ್ಟೊ ಬಂದಿರುವ ಬೆಳೆಯನ್ನ ಕೊಯ್ಲು ಮಾಡುವ ಸಮಯದಲ್ಲಿ ರಾಜ್ಯದ ಹಲವೆಡೆ ಮಳೆರಾಯನ ಅಬ್ಬರ ಜೋರಾಗಿದೆ. ಮುಂದಿನ ಮಂಗಳವಾರದವರೆಗೂ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಮಗಳೂರು, ಚಾಮರಾಜನಗರ, ವಿಜಯನಗರ ಜಿಲ್ಲೆಗಳಲ್ಲಿ ನಾಳೆಯ ತನಕ ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಇನ್ನು ಕೋಲಾರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ವರುಣ ಜೋರಾಗಿಯೇ ಅಬ್ಬರಿಸಲಿದ್ದಾನೆ ಎನ್ನಲಾಗಿದೆ.
ಕೆಲ ಜಿಲ್ಲೆಗಳಿಗೆ ಹವಮಾನ ಇಲಾಖೆ ಹೈ ಅಲರ್ಟ್ ಕೂಡ ನೀಡಿದೆ. ದಕ್ಷಿಣ ಕನ್ನಡ ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಕರಾವಳಿ ಭಾಗದಲ್ಲೂ ಡಿಸೆಂಬರ್ 13ರ ತನಕ ಮಳೆಯಾಗಲಿದೆ ಎನ್ನಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












