Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚುನಾವಣೆ ಹೊತ್ತಲ್ಲೇ ಕಾರ್ಪೋರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆ..!

---Advertisement---

 

 

ವಿಜಯಪುರ : ನಗರದಲ್ಲಿ ಹಾಡುಹಗಲೇ ಗುಂಡಿನ ದಾಳಿ ನಡೆದಿದ್ದು, ಕಾರ್ಪೋರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ರೌಡಿ ಶೀಟರ್ ಆಗಿದ್ದ ಹೈದರ್ ನದಾಫ್ ಮೇಲೆ ಗುಂಡಿನ ದಾಳಿ‌ ನಡೆದ ಪರಿಣಾಮ ಹೈದರ್ ನದಾಫ್ ಸ್ಥಳದಲ್ಲಿಯೇ ಮೃತಪಟ್ಟದ್ದಾರೆ.

ವಿಜಯಪುರ ನಗರದಲ್ಲಿ ಚಾಂದಪೂರ ಕಾಲೋನಿ ಬಳಿ‌ ಇರುವ ತನ್ನ ನಿವಾಸದಿಂದ ಹೊರ ಬಂದು ಕಾರು ಹತ್ತಿತ್ತದ್ದ ವೇಳೆ ಹೈದರ್ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು, ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಹೈದರ್ ಓಡಿ ಹೋಗಿದ್ದಾರೆ, ಬೆನ್ನಟ್ಟಿದ್ದ ದುಷ್ಕರ್ಮಿಗಳು ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಎರಡು ಗುಂಡುಗಳು ಪತ್ತೆಯಾಗಿವೆ.

 

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವದಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೊನ್ನೆ ನಡೆದ ಪಾಲಿಕೆ ಚುನಾವಣೆಯಲ್ಲಿ ಹೈದರ್ ನದಾಫ್ ವಾರ್ಡ್ ನಂ.19 ರಿಂದ ತಮ್ಮ ಪತ್ನಿ ನಿಶಾತ್ ನದಾಫ್ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸಿ ಗೆಲುವು ಸಾಧಿಸಿದ್ದರು. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು.
ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment