ಬೆಂಗಳೂರು .ಜುಲೈ.31: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಾಗೂ ಜಲನೀತಿಯನ್ವಯ, ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕೇವಲ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಲು ಮತ್ತು ಕಾಯ್ದಿರಿಸಲು ಮೈಸೂರು ವಿಭಾಗದ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿ ಆದೇಶಿಸಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಬರುವ ದಿನಗಳಲ್ಲಿ ‘ಎಲ್-ನಿನೋ’ ಪರಿಣಾಮದಿಂದಾಗಿ ಮತ್ತಷ್ಟು ಮಳೆ ಅಭಾವ ಹಾಗೂ ಬರ ಪರಿಸ್ಥಿತಿ ಎದುರಾಗುವ ಸಾಧ್ಯತೆಯಿದೆ. ಈ ಕುರಿತು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಮಾನ್ಯ ಮುಖ್ಯಮಂತ್ರಿಗಳು, “ಜಲಾಶಯ ನೆಚ್ಚಿಕೊಂಡು ಯಾವುದೇ ರೈತರು ಬೆಳೆ ಹಾಕಬೇಡಿ” ಎಂದು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
ಮೈಸೂರು ವಿಭಾಗದ ವ್ಯಾಪ್ತಿಗೆ ಬರುವ ಕಬಿನಿ, ಹಾರಂಗಿ, ಹೇಮಾವತಿ, ಭದ್ರಾ, ಕೃಷ್ಣರಾಜಸಾಗರ, ನುಗು, ತಾರಕ, ಸುವರ್ಣಾವತಿ, ಚಿಕ್ಕಹೊಳೆ, ಗುಂಡಾಲ್, ಉಡುತೊರೆಹಳ್ಳ, ವಾಟೇಹೊಳೆ ಹಾಗೂ ಯಗಚಿ ಜಲಾಶಯಗಳ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಕಾಯ್ದಿರಿಸಲಾಗುತ್ತದೆ:
ಪರಿಸ್ಥಿತಿಯ ಗಂಭೀರತೆಯನ್ನು ಅರ್ಥೈಸಿಕೊಂಡು, ರೈತ ಬಾಂಧವರು ಜಲಾಶಯದ ನೀರನ್ನು ಅವಲಂಬಿಸುವ ಬೆಳೆಗಳನ್ನು ಬೆಳೆಯಬಾರದು ಎಂದು ವಿನಂತಿಸಲಾಗಿದೆ. ಕೃಷಿ ಇಲಾಖಾ ಅಧಿಕಾರಿಗಳ ಸಲಹೆಯಂತೆ ಕೇವಲ ಮಳೆ ಆಶ್ರಿತ ಬೆಳೆಗಳನ್ನು ಮಾತ್ರ ಬೆಳೆಯುವಂತೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕುಡಿಯುವ ನೀರಿನ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










