ಬೆಂಗಳೂರು: ಇನ್ನು 10 ತಿಂಗಳು ಕಳೆದರೆ ಸಾಕು ಲೋಕಸಭಾ ಚುನಾವಣೆ ಬರಲಿದೆ. ಈಗಾಗಲೇ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಗಾಗಿ ಸಾಕಷ್ಟು ತಯಾರಿ ನಡೆಸಿಕೊಳ್ಳುತ್ತಿದೆ. ಇದರ ಮಧ್ಯೆ ಡಿಕೆ ಸುರೇಶ್ ಪದೇ ಪದೇ ರಾಜಕೀಯ ವೈರಾಗ್ಯದ ಬಗ್ಗೆ ಮಾತನಾಡಿದ್ದಾರೆ.
2019ರಲ್ಲಿ ಕಾಂಗ್ರೆಸ್ ನಿಂದ ಡಿಕೆ ಸುರೇಶ್ ಒಬ್ಬರೆ ಸಂಸದರಾಗಿ ಜಯಭೇರಿ ಬಾರಿಸಿರೋದು. ಆದರೆ ಈ ಬಾರಿ ಅದ್ಯಾಕೋ ಪದೇ ಪದೇ ರಾಜಕೀಯ ವೈರಾಗ್ಯದ ಮಾತುಗಳನ್ನು ಆಡಿದ್ದಾರೆ. ಇದರ ಹಿಂದೆ ರಾಜಕೀಯ ರಣತಂತ್ರವಿದೆ ಎನ್ನಲಾಗಿದೆ. ಅದುವೆ ಹೈಕಮಾಂಡ್ ನಾಯಕರ ಗಮನ ಸೆಳೆಯುವ ಉದ್ದೇಶದಿಂದ ಈ ಮಾತುಗಳನ್ನು ಆಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಾ ಇದೆ.
ಈ ಬಾರಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಆದರೆ ಸಿಎಂ ವಿಚಾರದಲ್ಲಿ ಸಾಕಷ್ಟು ಹಗ್ಗ- ಜಗ್ಗಾಟವಾಗಿತ್ತು. ಡಿಕೆ ಶಿವಕುಮಾರ್ ಸಿಎಂ ಸ್ಥಾನವನ್ನು ಬಿಟ್ಟುಕೊಡುವುದಕ್ಕೆ ಸಿದ್ಧವಿರಲಿಲ್ಲ. ಆದರೂ ಹೈಕಮಾಂಡ್ ಮಾತಿಗೆ ಬೆಲೆ ಕೊಟ್ಟು ಡಿಸಿಎಂ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ. ಆದರೆ ಎರಡು ವರ್ಷಗಳ ಬಳಿಕ ಮತ್ತೆ ಸಿಎಂ ಮಾಡ್ತೇವೆ ಎಂದು ಹೈಕಮಾಂಡ್ ಸೂಚನೆ ನೀಡಿದೆ. ಇದನ್ನು ಹೈಕಮಾಂಡ್ ಗೆ ನೆನಪು ಮಾಡಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.