ನವದೆಹಲಿ: ಮೈಸೂರು ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ. ರಾಜ್ಯದಿಂದ ಸಚಿವ ಎಸ್ ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಸಚಿವೆ ಶಶಿಕಲಾ ಜೊಲ್ಲೆ ಸೇರಿದಂತೆ ಹಲವು ಗಣ್ಯರು ರಾಷ್ಟ್ರಪತಿಗೆ ಹೂ ಗುಚ್ಛ ನೀಡಿ ಆಹ್ವಾನಿಸಿದ್ದಾರೆ.
ಸೆಪ್ಟೆಂಬರ್ 26 ರಿಂದ ಮೈಸೂರು ದಸರಾ ನಡೆಯಲಿದೆ. ತಾಯಿ ಚಾಮುಂಡೇಶ್ವರಿಗೆ ಅಗ್ರಪೂಜೆ ಸಲ್ಲಿಸುವ ಮೂಲಕ ದಸರಾ ಆರಂಭವಾಗುತ್ತದೆ. ಅಂದು ಬೆಳಗ್ಗೆ 9.45ರಿಂದ 10.5ರೊಳಗೆ ಸಲ್ಲುವ ಶುಭಲಗ್ನದಲ್ಲಿ ದಸರಾ ಉತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಚಾಲನೆ ನೀಡಲಿದ್ದಾರೆ.
ಸಿಎಂ ಬೊಮ್ಮಾಯಿ ಸೇರಿದಂತೆ ರಾಜ್ಯದ ಗಣ್ಯಾತೀಗಣ್ಯರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ರಾಜ್ಯಪಾಲರನ್ನು ಈಗಾಗಲೇ ರಾಜಭವನದಲ್ಲಿ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಇನ್ನು ದಸರಾ ಹಬ್ಬಕ್ಕೆ ರಾಷ್ಟ್ರಪತಿಗಳು ಬಂದು ಉದ್ಘಾಟನೆ ಮಾಡುತ್ತಿರುವುದು ಇದೆ ಮೊದಲ ಬಾರಿ ಎಂಬುದು ವಿಶೇಷ.