ಧಾರವಾಡ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ತಡಕೋಡ ಗ್ರಾಮದಲ್ಲಿ ನಡೆದಿದೆ. ಮನೆಗೆ ಬೆಂಕಿ ಬೀಳುತ್ತಿದ್ದಂತೆ ಶಾಸಕ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮನೆಗೆ ಬೆಂಕಿ ಹೊತ್ತಿಕೊಳ್ಳಲು ಶಾರ್ಟ್ ಸರ್ಕ್ಯೂಟ್ ಆಗಿರುವುದೇ ಕಾರಣ ಎನ್ನಲಾಗುತ್ತಿದೆ. ಸಾರಂಗಿ ಎಂಬುವವರ ಮನೆ ಇದರಿಂದಾಗಿ ಹಾನಿಗೊಳಗಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿಕೊಂಡ ಬೆಂಕಿಯಿಂದ ಮನೆಯ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದೆ.
ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಮನೆಯಲ್ಲಿದ್ದವರೆಲ್ಲಾ ಪ್ರಾಣಪಾಯದಿಂದ ಪಾರಾಗಿದ್ದಾರೆ. ಶಾಸಕ ವಿನಯ್ ಕುಲಕರ್ಣಿ ಪತ್ನಿ ಭೇಟಿ ನೀಡಿ, ಸರ್ಕಾರದಿಂದ ಈ ಸಮಸ್ಯೆ ಪರಿಹಾರ ಕೊಡಿಸುವುದಾಗಿ ತಿಳಿಸಿದ್ದಾರೆ.