Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಂಜನಗೂಡು ಟಿಕೆಟ್ ಧ್ರುವ ನಾರಾಯಣ್ ಮಗನಿಗಾ..? ಮಹದೇವಪ್ಪಗಾ..? : ಶುರುವಾಯ್ತು ಹೊಸ ಚರ್ಚೆ‌.!

---Advertisement---

ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ತೀವ್ರ ರಕ್ತಸ್ರಾವದಿಂದ ಹಠಾತ್ ನಿಧನರಾಗಿದ್ದಾರೆ. ಇಂದು ಅವರ ಹುಟ್ಟೂರಿನಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ. ಅವರ ನಿಧನ ಬೆನ್ಮಲ್ಲೇ ಟಿಕೆಟ್ ಚರ್ಚೆ ಶುರುವಾಗಿದೆ. ನಿನ್ನೆಯಷ್ಟೇ ರಣದೀಪ್ ಸುರ್ಜೆವಾಲ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರ ಮುಂದೆಯೇ ಧ್ರುವ ನಾರಾಯಣ್ ಅವರ ಮಗನಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದರು.

ಧ್ರುವ ನಾರಾಯಣ್ ನಂಜನಗೂಡಿನ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದರು. ಟಿ‌ನರಸೀಪುರದಿಂದ ಮಗನಿಗೆ ಟಿಕೆಟ್ ಬಯಸಿದ್ದರು. ಹೆಚ್ ಸಿ ಮಹದೇವಪ್ಪ ಅವರು ಕೂಡ ನಂಜನಗೂಡು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಒಂದೇ ಕುಟುಂಬದಲ್ಲಿ ಎರಡು ಕಡೆಗೆ ಇಬ್ಬರಿಗರ ಟಿಕೆಟ್ ಕೊಡುವುದು ಬಹಳ ಕಷ್ಟ. ಅದರ ಬದಲಿಗೆ ಟಿ ನರಸೀಪುರದಿಂದ ಟಿಕೆಟ್ ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಹಠಾತ್ ಧ್ರುವ ನಾರಾಯಣ್ ನಿಧನವಾಗಿದೆ. ಈ ಬೆನ್ನಲ್ಲೇ ನಂಜನಗೂಡು ಟಿಕೆಟ್ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿದೆ. ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಚರ್ಚೆ ನಡೆಯುತ್ತಿದೆ.

ಧ್ರುವ ನಾರಾಯಣ್ ಅವರ ಮಗನನ್ನು ಕಾರ್ಯಕರ್ತರು, ಬೆಂಬಲಿಗರು ರಾಜಕೀಯಕ್ಕೆ ಬರುವಂತೆ ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಗಮನಕ್ಕೂ ಇದನ್ನ ತಂದಿದ್ದಾರೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಮಹದೇವಪ್ಪ ಅವರಿಗಾ..? ಧ್ರುವ ನಾರಾಯಣ್ ಅವರ ಮಗನಿಗಾ ಎಂಬುದೇ ಪ್ರಶ್ನೆಯಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...