ಬೆಂಗಳೂರು: ನಕಲಿ ಮಾರ್ಕ್ಸ್ ಕಾರ್ಡ್ ಮಾರಾಟ ಮಾಡುತ್ತಿದ್ದ ಆರೋಪಿಗಳ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಕೇಶ್, ಕೃಷ್ಣ, ತನ್ಮಯ್ ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳು ಡ್ರೀಮ್ ಎಜುಕೇಷನ್ ಸರ್ವಿಸ್ ಹೆಸರಲ್ಲಿ ಕಚೇರಿ ತೆರೆದು ಅಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಮಾಡಿ ಮಾರಾಟ ಮಾಡುತ್ತಿದ್ದರು. ಹೆಬ್ಬಾಳದ ಕೆಂಪಾಪುರ ಬಳಿಯಲ್ಲಿ ಈ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದರು.
ಐವತ್ತು ಸಾವಿರಕ್ಕೆ ಬಿ.ಕಾಂ ಡಿಗ್ರಿ ಸರ್ಟಿಫಿಕೇಟ್ ಕೊಡ್ತಿದ್ದ ಆರೋಪಿಗಳು. ಒಂದೊಂದು ಡಿಗ್ರಿ ಸರ್ಟಿಫಿಕೇಟ್ ಗೂ ಒಂದೊಂದು ರೇಟ್ ಫಿಕ್ಸ್ ಮಾಡಿದ್ರು. ಮುಂಗಡ ಹಣ ಕೊಟ್ಟ ಒಂದು ತಿಂಗಳೊಳಗಾಗಿ ಮಾರ್ಕ್ಸ್ ಕಾರ್ಡ್ ಕೊಡ್ತಿದ್ರು.
ಖಚಿತ ಮಾಹಿತಿಯೊಂದಿಗೆ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಈ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು