Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್..!

---Advertisement---

 

ಬಿಜೆಪಿಯಲ್ಲಿ ಇನ್ನು ಸಹ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ, ರಾಜ್ಯಾಧ್ಯಕ್ಷ ಸ್ಥಾನಕ್ಕೂ ಹೆಸರು ಸೂಚಿಸಿಲ್ಲ. ಇದೀಗ ಮತ್ತೊಂದು ಹುದ್ದೆ ಖಾಲಿಯಾಗಿದೆ. ಸಿಟಿ ರವಿ ಇಷ್ಟು ದಿನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದರು. ಇದೀಗ ಆ ಹುದ್ದೆಯಿಂದ ಸಿಟಿ ರವಿಗೆ ಕೊಕ್ ನೀಡಲಾಗಿದೆ.

ಲೋಕಸಭಾ ಚುನಾವಣೆಯೂ ಹತ್ತಿರದಲ್ಲಿದೆ. ಈಗಾಗಲೇ ತಯಾರಿಯೂ ನಡೆಯುತ್ತಿದೆ. ಇದರ ನಡುವೆ ಬಿಜೆಪಿ ಹೊಸ ಹೊಸ ಯೋಜನೆ ರೂಪಿಸುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ತಮ್ಮ ತಂಡವನ್ನು ಹೊಸದಾಗಿ ರೂಪಿಸಲು ಹೊರಟಿದ್ದಾರೆ. ಹೀಗಾಗಿ 38 ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ.

ಜೆಪಿ ನಡ್ಡಾ ಅವರು ಹೊಸ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಸಿಟಿ ರವಿಯವರ ಹೆಸರನ್ನು ಕೈಬಿಡಲಾಗಿದೆ. ವಸುಂಧರಾ, ರಮಣ್ ಸಿಂಗ್​​, ಸಂಜಯ್ ಬಂಡಿ, ಕೈಲಾಸ್ ವಿಜಯ ವರ್ಗೀಯ ಸೇರಿ ಇನ್ನು ಕೆಲವರು ಇದ್ದಾರೆ. ಇನ್ನು ಸಿಟಿ ರವಿ ಸದ್ಯ ರಾಜ್ಯಾಧ್ಯಕ್ಷ ಹುದ್ದೆ ಖಾಲಿ ಇರುವ ಕಾರಣ ಆ ಹುದ್ದೆ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment