Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿಗರ ವಿರುದ್ಧ ಕಾಂಗ್ರೆಸ್ ಗೆ ಸಿಕ್ತು ಮತ್ತೊಂದು ಅಸ್ತ್ರ : ಹನುಮಾನ್ ಮುಂದೆ ಬಿಕಿನಿ ತೊಟ್ಟು ಪೋಸ್..!

---Advertisement---

 

ಭೋಪಾಲ್: ಬಿಜೆಪಿ ಸಚಿವ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಹನುಮಾನ್ ದೇವರಿಗೆ ಅವಮಾನವಾದಂತ ಘಟನೆ ನಡೆದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ, ಬಿಜೆಪಿ ವಿರುದ್ಧ ಸಾಕಷ್ಟು ಜನ ಆಕ್ರೋಶ ಹೊರ ಹಾಕಿದ್ದಾರೆ. ಕಾಂಗ್ರೆಸ್ ಗೆ ಕೂಡ ಇದೊಂದು ಅಸ್ತ್ರವಾಗಿ ಸಿಕ್ಕಿದೆ.

ಮಧ್ಯಪ್ರದೇಶದ ರತ್ಲಾಮ್ ನಗರದಲ್ಲಿ ಈ ಘಟನೆ ನಡೆದಿದೆ. ಮಹಿಳಾ ದೇಹ ದಾರ್ಢ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯನ್ನು ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವ ಮೋಹನ್ ಯಾದವ್ ಉದ್ಘಾಟನೆ ಮಾಡಿದ್ದರು. ಇದೇ ವೇದಿಕೆಯಲ್ಲಿ ಹನುಮಾನ್ ಪ್ರತಿಮೆಯನ್ನು ಇಡಲಾಗಿತ್ತು. ಈ ಪ್ರತಿಮೆಯ ಮುಂದೇನೇ ಸ್ಪರ್ಧಿಗಳು ತಮ್ಮ ದೇಹ ದಾರ್ಢ್ಯವನ್ನು ಪ್ರದರ್ಶನ ಮಾಡಲಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಹನುಮಾನ್ ಪ್ರತಿಮೆ ಮುಂದೇನೆ ಮಹಿಳಾ ಬಾಡಿ ಬಿಲ್ಡರ್ಸ್ ಬಿಕಿನಿ ತೊಟ್ಟು ತಮ್ಮ ದೇಹದಾರ್ಢ್ಯ ಪ್ರದರ್ಶನ ಮಾಡಿದ್ದಾರೆ. ಇದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕರು, ಅಶ್ಲೀಲ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 400 ಬಾಡಿ ಬಿಲ್ಡರ್ಸ್ ಪ್ರದರ್ಶನ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...