ಬೆಂಗಳೂರು: ಮಾಜಿ ರೌಡಿ ಸೈಲೆಂಟ್ ಸುನಿ ಆಕ್ಟೀವ್ ಆಗಿದ್ದು, ಚುನಾವಣರಗೆ ಚಾಮರಾಜಪೇಟೆಯಿಂದ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಇದೀಗ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿ, ಆಕ್ರೋಶ ಹೊರ ಹಾಕಿದೆ.
ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್! @JnanendraAraga ಅವರೇ, ಸೈಲೆಂಟ್ ಸುನಿಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ. ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು?ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಕ್ರಿಮಿನಲ್ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ?
@JnanendraAraga ಅವರೇ, ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ? ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ @BJP4Karnataka ನಾಯಕರ ಕೈಗೆ ಸಿಕ್ಕಿದ್ದು ಹೇಗೆ? ವಾಂಟೆಡ್ ಲಿಸ್ಟ್ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ! ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು – ಬಿಜೆಪಿ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ @BJP4Karnataka?ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ? ಎಂದು ಟ್ವೀಟ್ ಮಾಡಿದೆ.