ಬೆಂಗಳೂರು: ರಾಜ್ಯದಲ್ಲಿ ಸದ್ಯ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಹಲವು ಹಗರಣಗಳು ಸದ್ದು ಮಾಡಿದ್ದವು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಹಳೆ ಹಗರಣಗಳ ತನಿಖೆ ನಡೆಸಲಾಗುತ್ತಿದೆ. ಅದಕ್ಕಾಗಿಯೇ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿದೆ.
ಈ ಮೂಲಕ ರಾಜ್ಯದಲ್ಲಿ ಮತ್ತೆ ಬಿಟ್ ಕಾಯಿನ್ ಪ್ರಕರಣ ಸದ್ದು ಮಾಡುತ್ತಿದೆ. ಸಿಐಎಇ ಎಡಿಜಿಪಿ ಮನೀಷ್ ಕರ್ಬೀಕರ್ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ಅವರ ಟೀಂನಲ್ಲಿ ಡಿಐಜಿ ವಂಶಿಕೃಷ್ಣ, ಡಿಸಿಪಿ ಅನೂಪ್ ಶೆಟ್ಟಿ, ಸಿಐಡಿ ಎಸ್ಪಿ ಶರತ್ ಇರಲಿದ್ದಾರೆ.
ಹಿಂದಿನ ಬೊಮ್ಮಾಯಿ ನೇತೃತ್ವದ ಸರ್ಕಾರ, ಪ್ರಕರಣದ ತನಿಖೆಯನ್ನು ಸಿಸಿಬಿಗೆ ಆದೇಶ ನೀಡಿತ್ತು. ಸಿಸಿಬಿ ಅಧಿಕಾರಿಗಳು ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದಲ್ಲಿ ಅನೇಕ ಮಂದಿಯ ವಿರುದ್ಧ ಆರೋಪ ಕೇಳಿಬಂದಿತ್ತು. ಹಿಂದಿನ ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಆರೋಪ ಮಾಡಿತ್ತು.