Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮನವಿಗೆ ಸ್ಪಂದಿಸದ ಡಿಸಿ : ಶ್ರೀರಂಗಪಟ್ಟಣ ಚಲೋಗೆ ಕರೆ ಕೊಟ್ಟ ಹಿಂದೂಪರ ಸಂಘಟನೆಗಳು..!

Facebook
Twitter
Telegram
WhatsApp

 

ಮಂಡ್ಯ: ದೇಶದಲ್ಲಿ ದೇಗುಲ, ಮಸೀದಿಯ ವಿವಾದ ಜೋರಾಗಿ ನಡೆಯುತ್ತಿದೆ. ದೇಗುಲ ಕೆಡವಿ ಮಸೀದಿ ನಿರ್ಮಾಣವಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಅದರಲ್ಲಿ ಶ್ರೀರಂಗಪಟ್ಟಣದ ಮಸೀದಿಯೂ ಒಂದು. ಶ್ರೀರಂಗಪಟ್ಟಣ ತಾಲೂಕಿನ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೆಟ್ಟಿಲೇರುವುದಕ್ಕೆ ಹಿಂದೂಪರ ಸಂಘಟನೆಗಳು ಮುಂದಾಗಿವೆ.

ಜಾಮಿಯಾ ಮಸೀದಿ ಈ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. ಈ ದೇವಸ್ಥಾನದ ಮೇಲೆ ಟಿಪ್ಪು ಸುಲ್ತಾನ್ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾರೆ. ಇಂದಿಗೂ ಜಾಮಿಯಾ ಮಸೀದಿಯಲ್ಲಿ ದೇವಸ್ಥಾನದ ಹಲವು ಕುರುಹುಗಳು ಇವೆ. ಇಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಗರ್ಭಗುಡಿ ಇದೆ. ಈ ನಿಟ್ಟಿನಲ್ಲಿ ನಮಗೆ ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಜಿಲ್ಲಾಧಿಕಾರಿಗೆ ವಿಹೆಚ್‌ಪಿ ಮನವಿ ಸಲ್ಲಿಸಿತ್ತು.

ಜಿಲ್ಲಾಧಿಕಾರಿಗಳು ಮನವಿಗೆ ಪೂರಕವಾಗಿ ಸ್ಪಂದಿಸದ ಕಾರಣ ವಿಹೆಚ್‌ಪಿ ಹಾಗೂ ಬಜರಂಗ ದಳದ ಪದಾಧಿಕಾರಿಗಳು ಜೂನ್ 4 ರಂದು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದ್ದಾರೆ. ಈ ಚಲೋದಲ್ಲಿ ಸಾವಿರಾರು ಮಂದಿ ಹನುಮನ ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಅಂದು ಹನುಮ ಭಕ್ತರು ಮಸೀದಿಯ ಒಳಗಡೆ ಪ್ರವೇಶ ಮಾಡಿ ಆಂಜನೇಯಸ್ವಾಮಿ ಪೂಜೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಜಾಮಿಯಾ ಮಸೀದಿ ಸುತ್ತಲೂ ಪೊಲೀಸರ ಕಣ್ಗಾವಲು ಇರಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

error: Content is protected !!