ಮಂಡ್ಯ: ದೇಶದಲ್ಲಿ ದೇಗುಲ, ಮಸೀದಿಯ ವಿವಾದ ಜೋರಾಗಿ ನಡೆಯುತ್ತಿದೆ. ದೇಗುಲ ಕೆಡವಿ ಮಸೀದಿ ನಿರ್ಮಾಣವಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಅದರಲ್ಲಿ ಶ್ರೀರಂಗಪಟ್ಟಣದ ಮಸೀದಿಯೂ ಒಂದು. ಶ್ರೀರಂಗಪಟ್ಟಣ ತಾಲೂಕಿನ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೆಟ್ಟಿಲೇರುವುದಕ್ಕೆ ಹಿಂದೂಪರ ಸಂಘಟನೆಗಳು ಮುಂದಾಗಿವೆ.
ಜಾಮಿಯಾ ಮಸೀದಿ ಈ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. ಈ ದೇವಸ್ಥಾನದ ಮೇಲೆ ಟಿಪ್ಪು ಸುಲ್ತಾನ್ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾರೆ. ಇಂದಿಗೂ ಜಾಮಿಯಾ ಮಸೀದಿಯಲ್ಲಿ ದೇವಸ್ಥಾನದ ಹಲವು ಕುರುಹುಗಳು ಇವೆ. ಇಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಗರ್ಭಗುಡಿ ಇದೆ. ಈ ನಿಟ್ಟಿನಲ್ಲಿ ನಮಗೆ ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಜಿಲ್ಲಾಧಿಕಾರಿಗೆ ವಿಹೆಚ್ಪಿ ಮನವಿ ಸಲ್ಲಿಸಿತ್ತು.
ಜಿಲ್ಲಾಧಿಕಾರಿಗಳು ಮನವಿಗೆ ಪೂರಕವಾಗಿ ಸ್ಪಂದಿಸದ ಕಾರಣ ವಿಹೆಚ್ಪಿ ಹಾಗೂ ಬಜರಂಗ ದಳದ ಪದಾಧಿಕಾರಿಗಳು ಜೂನ್ 4 ರಂದು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದ್ದಾರೆ. ಈ ಚಲೋದಲ್ಲಿ ಸಾವಿರಾರು ಮಂದಿ ಹನುಮನ ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಅಂದು ಹನುಮ ಭಕ್ತರು ಮಸೀದಿಯ ಒಳಗಡೆ ಪ್ರವೇಶ ಮಾಡಿ ಆಂಜನೇಯಸ್ವಾಮಿ ಪೂಜೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಜಾಮಿಯಾ ಮಸೀದಿ ಸುತ್ತಲೂ ಪೊಲೀಸರ ಕಣ್ಗಾವಲು ಇರಿಸಲಾಗಿದೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…