ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ತೀವ್ರವಾಗಿದೆ. ಮಳೆಯಿಂದಾಗಿ ರಾಜ್ಯದಲ್ಲಿ ಈವರೆಗೆ ನಾಲ್ಕು ಸಾವು ಆಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇನ್ನು ನಾಲ್ಕು ದಿನ ಬಾರಿ ಮಳೆ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಿಂದ ಹಾನಿಯಾಗಿದೆ. ಮಳೆಹಾನಿ ಕುರಿತು ಸಿಎಸ್ ಬಳಿ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ,ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಉಸ್ತುವಾರಿ ಸಚಿವರಿಗೆ ಸೂಚನೆ ನೀಡಿದ್ದಾರೆ. ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ವಿಧಾನಸೌಧದಲ್ಲಿ ಉಡುಪಿ ಜಿಲ್ಲೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದ್ದು, ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ ಇಬ್ಬರು ಮೃತ ಪಟ್ಟಿದ್ದಾರೆ. ನಾಳೆ ಸಂಜೆ ಸದನ ಮುಗಿದ ಬಳಿಕ ಜಿಲ್ಲೆಗೆ ಹೋಗ್ತೇನೆ. ಪರಿಶೀಲನೆ ಮಾಡುತ್ತೇನೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












