ಮಾರ್ಚ್ 18 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

suddionenews
1 Min Read

ಮಾರ್ಚ್ 18 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

Power outage in rural areas of Bellary on March 18

ಬಳ್ಳಾರಿ, (ಮಾ.16): ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿ 110/11ಕೆವಿ ಬಿಸಲಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾ.18ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಸಂತೋಷಿ ಬಾಯಿ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-52 ಶಂಕರಬಂಡೆ ಐಪಿ ಫೀಡರ್ ಮಾರ್ಗದ  ತಿರುಮಲನಗರ, ಶಂಕರಬಂಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್ ಕಮ್ಮರಚೇಡು ಗ್ರಾಮಗಳು.
ಎಫ್-53 ಶಂಕರಬಂಡೆ ಎನ್.ಜೆ.ವೈ ಫೀಡರ್ ಮಾರ್ಗದ ತಿರುಮಲನಗರ, ಶಂಕರಬಂಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್ ಮಿಂಚೇರಿ, ಬುರ್ರನಾಯಕನಹಳ್ಳಿ ಗ್ರಾಮಗಳು. ಎಫ್-54 ಬಿಸಲಹಳ್ಳಿ ಫೀಡರ್ ಮಾರ್ಗದ ಬಿಸಲಹಳ್ಳಿ, ಜನತಾನಗರ, ತಗ್ಗಿನಬೂದಿಹಾಳ್, ಅಮರಾಪುರ ಗ್ರಾಮಗಳು.  ಎಫ್-55 ಅಸುಂಡಿ ಐಪಿ ಫೀಡರ್ ಮಾರ್ಗದ ಬಿಸಲಹಳ್ಳಿ, ಜನತಾನಗರ, ತಗ್ಗಿನಬೂದಿಹಾಳ್, ಅಮರಾಪುರ, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ ಗ್ರಾಮಗಳು. ಎಫ್-56 ಕಮ್ಮರಚೇಡು ಎನ್.ಜೆ.ವೈ ಫೀಡರ್ ಮಾರ್ಗದ ತಲಮಾಮಿಡಿ, ಕಮ್ಮರಚೇಡು, ಬಿಸಲಹಳ್ಳಿ, ಜನತಾನಗರ, ತಗ್ಗಿನಬೂದಿಹಾಳ್, ಅಮರಾಪುರ, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *