Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಇನ್ನು ಎರಡು ದಿನ ಮಳೆ ಮುಂದುವರಿಕೆ : ಯಾವೆಲ್ಲಾ ಜಿಲ್ಲೆಯಲ್ಲಿ ಏನೇನು ಅನಾಹುತವಾಗಿದೆ..?

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರ ಇನ್ನು ಕಡಿಮೆಯಾಗಿಲ್ಲ. ಮಳೆಯ ಅಬ್ಬರಕ್ಕೆ ಹಲವೆಡೆ ಗ್ರಾಮಗಳು ಮುಳುಗಡೆಯಾಗುತ್ತಿವೆ. ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಕೆಲವೊಂದು ಜಿಲ್ಲೆಗಳಲ್ಲಿ ಜನರಿಗೆ ಊಟವೂ ಸಿಗುತ್ತಿಲ್ಲ ಅಂತಹ ಸ್ಥಿತಿ ನಿರ್ಮಾಣವಾಗಿದೆ. ಮಳೆ ನಿಂತರೆ ಸಾಕು ಎನ್ನುತ್ತಿದ್ದಾರೆ ಜನ. ಆದರೆ ಇನ್ನೂ ಎರಡು ದಿನ ಮಳೆಯಾಗುವ ಸೂಚನೆ ಇರುವುದರಿಂದ ಜನ ಮತ್ತಷ್ಟು ಕಂಗಲಾಗಿದ್ದಾರೆ.

ಗದಗ ಜಿಮ್ಸ್ ಆಸ್ಪತ್ರೆಗೆ ಮಳೆ ನೀರು ನುಗ್ಗಿದೆ. ಅದರಲ್ಲೂ ಔಷಧ ಮಳಿಗೆಗೆ ಮಳೆ ನೀರು ನುಗ್ಗಿದೆ. ಕೋಟ್ಯಾಂತರ ರೂಪಾಯಿ ಔಷಧ ದಾಸ್ತಾನು ನೀರಿನಿಂದ ಮುಳುಗಡೆಯಾಘಿದೆ. ಸದ್ಯ ಔಷಧವನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಲು ತಯಾರಿ ನಡೆಸುತ್ತಿದ್ದಾರೆ. ಇದರಿಂದ ರೋಗಿಗಳಿಗೂ ಪರದಾಟವಾದಂತಾಗಿದೆ.

ಇನ್ನು ಯಾದಗಿರಿ ಜಿಲ್ಲೆಯಲ್ಲಿ ಪ್ರೌಢಶಾಲೆಗೆ ನೀರು ನುಗ್ಗಿದೆ. ವಡಗೇರ ತಾಲೂಕಿನ ಕೊಂಕಲ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಧಿಕಾರಿಗಳ ವಿರುದ್ದ ಪೋಷಕರು ಹಾಗೂ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆಯ ಬದಾಮಿ ತಾಲೂಕಿನಲ್ಲಿ ಪ್ರವಾದ ಸ್ಥಿತಿ ಉಂಟಾಗಿದೆ. ಸುತ್ತ ಮುತ್ತಲಿನ ಗ್ರಾಮಗಳು ನೀರಿನಿಂದ ಸಮಸ್ಯೆ ಎದುರಾಗಿದೆ. ಮನೆಗಳಿಗೆಲ್ಲಾ ನೀರು ನುಗ್ಗಿದೆ. ಮೊಣಕಾಲುದ್ದ ನೀರು ನಿಂತಿದ್ದು, ಜನರ ನಿದ್ದೆ ಇಲ್ಲದ ದಿನಗಳನ್ನು ಕಳೆಯುತ್ತಿದ್ದಾರೆ. ಹಲವರು ಈಗಾಗಲೇ ಬೇರೆ ಕಡೆಗೆ ಸ್ಥಳಾಂತರವಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಬಾರಿ ಮಳೆಯಿಂದಾಗಿ ಸುಮಾರು 373 ಮನೆಗಳಿಗೆ ಹಾನಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಮಾಜಶಾಸ್ತ್ರಜ್ಞರಿಂದ ದೇಶದ ಬದಲಾವಣೆ ತರಲು ಸಾಧ್ಯ : ಕೆ.ಎಸ್.ನವೀನ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 15 : ಭಾರತದ ಭವಿಷ್ಯಕ್ಕೆ ಸಮಾಜಶಾಸ್ತ್ರಜ್ಞರ ಅವಶ್ಯಕತೆಯಿದೆ ಎಂದು ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು. ಕರ್ನಾಟಕ

ಬಡವರ ಬದುಕಿಗೆ ಬೆಳಕಾದ ಭೋವಿ ಒಡ್ಡರ ನಿಗಮ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಸುದ್ದಿಒನ್, ಹೊಳಲ್ಕೆರೆ, ನವೆಂಬರ್. 15 : ಭೋವಿ ಒಡ್ಡರ ನಿಗಮ ಬಡವರ ಬದುಕಲ್ಲಿ ಬೆಳಕಾಗಲೀ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ತಿಳಿಸಿದರು.   ಅಂಗವಿಕಲ ಮಕ್ಕಳನ್ನು ಹೊಂದಿರುವ ಬೋರನಹಳ್ಳಿ

ಪ್ರಕೃತಿ ಶಾಲೆಯಲ್ಲಿ ಗಣಿತ ಹಾಗೂ ವಿಜ್ಞಾನ ವಸ್ತು ಪ್ರದರ್ಶನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 15 : ನಗರದ ತುರುವನೂರು ರಸ್ತೆಯ ಬಿ.ಎಲ್. ಗೌಡ ಲೇಔಟ್ ನಲ್ಲಿರುವ ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣಿತ ಹಾಗೂ ವಿಜ್ಞಾನ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು

error: Content is protected !!