ಬೆಂಗಳೂರು: ಕಳೆದ ಕೆಲವು ದಿನಗಳಿಂದ ಮಸೀದಿಯಲ್ಲಿನ ಧ್ವನಿವರ್ಧಕದ ಸೌಂಡ್ ಗೆ ಚರ್ಚೆ ನಡೆಯುತ್ತಿತ್ತು. ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಸುಪ್ರೀಂ ಕೋರ್ಟ್ ನೀಡಿರುವ ಆದೇಶದಂತೆ ಡೆಸಿಬಲ್ ಪಾಲನೆ ಮಾಡಬೇಕೆಂದು ಸರ್ಕಾರ ತಿಳಿಸಿತ್ತು. ಇದಾದ ಬಳಿಕ ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ಕಡ್ಡಾಯ ಎಂದಿದೆ.
ಈ ನಿಟ್ಟಿನಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ಕೋರಿ ಸಾಲು ಸಾಲು ಅರ್ಜಿ ಸಲ್ಲಿಕೆಯಾಗಿವೆ. ಬೆಂಗಳೂರಿನಲ್ಲಿ 700 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಸಾಲುಸಾಲು ಅರ್ಜಿಗಳು ಸಲ್ಲಿಕೆಯಾಗಿದ್ದು, ಮೈಕ್ ಬಳಕೆಗೆ ಎಸಿಪಿ ನೇತೃತ್ವದ ಸಮಿತಿಯ ಅನುಮತಿ ಪಡೆಯಬೇಕಾದದ್ದು ಕಡ್ಡಾಯವಾಗಿದೆ.
ಅನುಮತಿಗೆ ಅರ್ಜಿ ಸಲ್ಲಿಸಲು ಸರ್ಕಾರ 15 ದಿನಗಳ ಗಡುವು ನೀಡಿತ್ತು. ಹೀಗಾಗಿ ಬೆಂಗಳೂರು ನಗರದಲ್ಲಿ 700ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಜಿಗಳ ಪರಿಶೀಲನೆ ನಡೆಸಿರುವ ಎಸಿಪಿ ನೇತೃತ್ವದ ಸಮಿತಿ ನಂತರ ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಅರ್ಜಿಗಳ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.