ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ದಾವಣಗೆರೆ : ಇಂದಿನಿಂದ ರಾಜ್ಯದಲ್ಲಿ ಉಚಿತ ಬಸ್ ಸೇವೆ ಆರಂಭಗೊಂಡಿದೆ. ಕಾಂಗ್ರೆಸ್ ಕೊಟ್ಟ ಭರವಸೆಗಳಲ್ಲಿ ಶಕ್ತಿ ಯೋಜನೆಗೆ ಇಂದಿನಿಂದ ಚಾಲನೆ ಸಿಕ್ಕಿದೆ. ಬಸ್ ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ರಾಜ್ಯದ ಒಳಗೆ ಎಲ್ಲಿಂದ ಎಲ್ಲಿಗೆ ಬೇಕಾದರೂ ಓಡಾಡಬಹುದಾಗಿದೆ. ಇದು ಮಹಿಳೆಯರಿಗೆ ಮಾತ್ರ. ಬಸ್ ಫ್ರೀ ಇರುವ ಕಾರಣ ರಾಜ್ಯದಲ್ಲಿಯೇ ಓಡಾಡಲು ಮಹಿಳೆಯರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಅಂತವರಿಗೆ ಕಾಂಗ್ರೆಸ್ ಶಾಸಕ ಕಿವಿ ಮಾತು ಹೇಳಿದ್ದಾರೆ.
ಮಾಯಕೊಂಡ ಶಾಸಕ ಬಸವಂತಪ್ಪ ಅವರು ಮಾತನಾಡಿ, ಬಸ್ ಫ್ರೀ ಇದೆ ಅಂತ ವಾರಗಟ್ಟಲೇ ಓಡಾಡಬೇಡಿ. ಏನೇ ಕೆಲಸ ಇದ್ದರೂ ಎರಡು ದಿನದಲ್ಲಿ ಮುಗಿಸಿಕೊಂಡು ಬನ್ನಿ. ಇಲ್ಲವಾದರೆ ನಿಮ್ಮ ಗಂಡಂದಿರು ಬೇರೆ ದಾರಿ ಹಿಡಿಯುತ್ತಾರೆ. ನಿಮ್ಮ ಗಂಡಂದಿರಿಗೆ ಅಡುಗೆ ಮಾಡಿ ಹಾಕುವವರು ಯಾರು..? ಅದಕ್ಕೆ ಎರಡೇ ದಿನದಲ್ಲಿ ವಾಪಾಸ್ ಬಂದು ಬಿಡಿ ಎಂದು ಸಲಹೆ ನೀಡಿದ್ದಾರೆ.
ಆಸ್ಪತ್ರೆ ಆಗಲಿ, ದೇವಸ್ಥಾನಕ್ಕಾಗಲೀ, ನಿಮ್ಮ ಸಂಬಂಧಿಕರ ಮನೆಗೆ ಆಗಲೀ ಸುಖಾ ಸುಮ್ಮನೆ ಹೋಗಬೇಡಿ. ಬಸ್ ಫ್ರೀ ಇದೆ ಅಂತ ಹೋಗುವ ಬದಲು ಅವಶ್ಯಕತೆ ಇದ್ದಾಗ ಮಾತ್ರ ಹೋಗಿ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್