ಬೆಂಗಳೂರು: ಆರಂಭದಲ್ಲಿ ಮುಂಗಾರು ಕೈಕೊಟ್ಟಿದೆ. ಆದರೆ ಇತ್ತಿಚೆಗೆ ರಾಜ್ಯದೆಲ್ಲೆಡೆ ಮಳೆ ಉತ್ತಮವಾಗಿ ಆಗುತ್ತಿದೆ. ಅಕ್ಟೋಬರ್ 9ರಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ದಕ್ಷಿಣ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದಂತ ಮಳೆಯಾಗುತ್ತದೆ. ಅಕ್ಟೋಬರ್ 9ರಿಂದ 22ರವರೆಗೂ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಲಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮಳೆ ಶುರಿವಾಗಿದೆ.
ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ರಾಮನಗರ, ತುಮಕೂರು ಮತ್ತು ಬೆಂಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.