ಸುದ್ದಿಒನ್, ಬೆಂಗಳೂರು, ಆಗಸ್ಟ್. 13 : ಒಳ ಮೀಸಲಾತಿ ಜಾರಿಗೊಳಿಸಲು ಮಿನಾಮೇಷ ಎಣಿಸುತ್ತಿರುವ ಸರ್ಕಾರ ತನ್ನ ನಿಲುವು ಬದಲಿಸಿ ನ್ಯಾ. ನಾಗಮೋಹನ್ ದಾಸ್ ವರದಿಯನ್ವಯ ಶೀಘ್ರವೇ ಒಳ ಮೀಸಲಾತಿ ಜಾರಿಗೆ ತರುವಂತೆ ಶ್ರೀ ಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿಯವರ ನೇತೃತ್ವದ ನಿಯೋಗ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಆಗ್ರಹಿಸಿತು.

ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಕಳೆದ ಮೂರು ದಶಕಗಳಿಂದ ಮಾದಿಗ ಸಮುದಾಯ ನಡೆಸುತ್ತಿರುವ ಹೋರಾಟ ಹಾಗೂ ಒಳ ಮೀಸಲು ನೀಡದೆ ಇರುವುದರಿಂದ ಸಮುದಾಯಕ್ಕೆ ಆಗುತ್ತಿರುವ ತಾರತಮ್ಯದ ಕುರಿತು ವಿವರಿಸಿದ ಶ್ರೀಗಳು ಯಾವುದೇ ಒತ್ತಡಕ್ಕೆ ಮಣಿಯದೆ ಒಳ ಮೀಸಲಾತಿ ಜಾರಿಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸಿದರು, ಸ್ವಾಮೀಜಿಯವರ ಮನವಿಗೆ ಸ್ಪಂದಿಸಿದ ಸಿ,ಎಂ ಹಾಗೂ ಡಿ ಸಿ ಎಂ ಸರ್ಕಾರ ಸಾಮಾಜಿಕ ನ್ಯಾಯದ ಪರವಿದೆ ಹೀಗಾಗಿ ಒಳ ಮೀಸಲಾತಿ ಜಾರಿ ಮಾಡುವುದು ಶತಸಿದ್ದ ಎಂದು ಭರವಸೆ ನೀಡಿದರು.
ಈ ನಿಯೋಗದಲ್ಲಿ ಮಾಜಿ ಸಂಸತ್ ಸದಸ್ಯರಾದ ಬಿ.ಎನ್. ಚಂದ್ರಪ್ಪ ಮಾಜಿ ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ, ಮಾದಿಗ ಸಮುದಾಯದ ಕೆಲವು ಮುಖಂಡರು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










