ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಇಂದು ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಚಿವ ಗೋವಿಂದ ಕಾರಜೋಳ ಅವರು ಸ್ವಾಮೀಜಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಸ್ವಾಮೀಜಿಗೆ ಹೆಚ್ಚಿನ ಚಿಕಿತ್ಸೆ ಪಡೆದುಕೊಳ್ಳುವಂತೆ ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಸ್ವಾಮೀಜಿಗೆ ವೈದ್ಯರ ತಂಡ ಮಠದ ಕೊಠಡಿಯಲ್ಲಿಯೇ ಚಿಕಿತ್ಸೆ ನೀಡುತ್ತಿದೆ. ಆದರೆ ಇನ್ನು ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ. ಆದರೆ ಸ್ವಾಮೀಜಿ, ರೋಗವೇನಿದ್ದರು ತನ್ನಿಂದ ತಾನೇ ವಾಸಿಯಾಗಬೇಕು ಎಂಬ ಮನಸ್ಥೈರ್ಯದಲ್ಲಿದ್ದಾರೆ. ಹೀಗಾಗಿ ಸಿಎಂ ಬೊಮ್ಮಾಯಿ ಅವರು ಸ್ವಾಮೀಜಿಗೆ ಕೈ ಮುಗಿದು ಮನವಿ ಮಾಡಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ಸ್ವಾಮೀಜಿಯ ಆರೋಗ್ಯ ವಿಚಾರಿಸಿದ್ದಾರೆ. ಫೋನ್ ಕಾಲ್ ಮಾಡುವ ಮೂಲಕ ಸ್ವಾಮೀಜಿಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸಿದ್ದೇಶ್ವರ ಸ್ವಾಮೀಜಿಯ ಆರೋಗ್ಯದ ಬಗ್ಗರ ಹಲವು ಊಹಾಪೋಹಗಳು ಎದ್ದಿದ್ದವು. ಇದೀಗ ಸಿಎಂ ಬೊಮ್ಮಾಯಿ ಅವರು ಆರೋಗ್ಯ ವಿಚಾರಿಸಿದ್ದು, ಹಡಚ್ಚಿನ ಚಿಕಿತ್ಸೆಗೆ ಮನವಿ ಮಾಡಿದ್ದಾರೆ.