ಶಿವಮೊಗ್ಗ: ಹಿಜಾಬ್ ವಿವಾದ ಈಗ ಕೋರ್ಟ್ ನಲ್ಲಿದೆ. ಮುಂದಿನ ಆದೇಶದ ತನಕ ಯಾವುದೇ ಧಾರ್ಮಿಕ ವಸ್ತ್ರ ಧರಿಸಿ ಶಾಲಾ ಕಾಲೇಜಿಗೆ ಬರಬಾರದೆಂದು ಕೋರ್ಟ್ ಸೂಚನೆ ಕೊಟ್ಟಿದೆ. ಆದರೂ ಕೆಲವೆಡೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಬರುತ್ತಿದ್ದಾರೆ.

ಶಿವಮೊಗ್ಗದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಸಹ 10 ನೇ ತರಗತಿಗೆ ತಾಲೂಕು ಮಟ್ಟದ ಪೂರ್ವಭಾವಿ ಸಿದ್ಧತಾ ಪರೀಕ್ಷೆ ಇತ್ತು. ವಿಜ್ಞಾನ ಪರೀಕ್ಷೆ ನಡೆಯುತ್ತಿದೆ. ಹಿಜಬ್, ಬುರ್ಖಾ ಧರಿಸಿ 9 ಹಾಗೂ 10ನೇ ತರಗತಿ ವಿದ್ಯಾರ್ಥಿನಿ ಬಂದಿದ್ದರು. ಆದರೆ ಹಿಜಬ್, ಬುರ್ಖಾ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಶಿಕ್ಷಕರ ನಿರಾಕರಣೆ ಮಾಡಿದರು. ಇದರಿಂದಾಗಿ ವಿದ್ಯಾರ್ಥಿನಿಯರು ಶಾಲೆಯಿಂದ ಹೊರಗೆ ಹೋಗಿದ್ದಾರೆ.

ನಿನ್ನೆ ಕೂಡ ತರಗತಿಗೆ ಹಾಜರಾಗಿದ್ದ ವಿದ್ಯಾರ್ಥಿನಿಯರಿಗೆ ಶಿಕ್ಷಕರು ಹಿಜಬ್, ಬುರ್ಖಾ ತೆಗೆಯುವಂತೆ ಸೂಚಿಸಿದ್ದರು. ಕೆಲ ವಿದ್ಯಾರ್ಥಿನಿಯರು ಬುರ್ಖಾ, ಹಿಜಬ್ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಿದ್ದರು.


