ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಬಾರಿ ತಯಾರಿ ನಡೆಸಿವೆ. ಈಗಾಗಲೇ ಜೆಡಿಎಸ್ ಹಾಗೂ ಕಾಂಗ್ರೆಸ್ ಮೊದಲ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ಆದರೆ ಬಿಜೆಪಿ ಯಾವ ಸುಳಿವನ್ನು ನೀಡುತ್ತಿಲ್ಲ. ಸದ್ಯ ನಿನ್ನೆ ಎಲ್ಲಾ ಸಭೆಗಳು ನಡೆದಿದ್ದು, ದೊಡ್ಡದೊಡ್ಡವರ ಸಮ್ಮುಖದಲ್ಲಿ ಒಂದಷ್ಟು ಆಕಾಂಕ್ಷಿಗಳಿಗೆ ಟಿಕೆಟ್ ಘೋಷಣೆಯಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಹಲವರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಅದರಲ್ಲಿ ತಿಪ್ಪಾರೆಡ್ಡಿ ಕೂಡ ಒಬ್ಬರು. ತಿಪ್ಪಾರೆಡ್ಡಿಗೆ ಟಿಕೆಟ್ ನೀಡುವುದರಿಂದ ಬಿಜೆಪಿಗೇನೆ ಒಂದಷ್ಟು ಲಾಭಗಳಿದೆ. ಹೀಗಾಗಿ ತಿಪ್ಪಾರೆಡ್ಡಿಗೆ ಟಿಕೆಟ್ ನೀಡುವ ನಿರೀಕ್ಷೆ ಇದೆ. ಅದರೂ ಜಿಲ್ಲೆಯಲ್ಲೂ ನೆಗೆಟಿವ್ ಕಮೆಂಟ್ ಗಳು ಹರಿದಾಡುತ್ತಿದೆ.
ಸದ್ಯ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯೂರಿನಿಂದ ಪೂರ್ಣಿಮಾ ಶ್ರೀನಿವಾಸ್ ಅವರ ಹೆಸರು ಕೇಳಿ ಬರುತ್ತಿದೆ. ಈ ಬಾರಿಯೂ ಪೂರ್ಣಿಮಾ ಶ್ರೀನಿವಾಸ್ ಅವರೇ ಸ್ಪರ್ಧಿಸಲಿದ್ದಾರೆ. ಆದರೆ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಸ್ವಲ್ಪದರಲ್ಲೇ ತಪ್ಪಿ ಹೋಗಿತ್ತು. ಈ ಬಾರಿಯೂ ಗೆಲ್ಲುವ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.