ಬೆಂಗಳೂರು : ರಾಜ್ಯದ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸುಸಜ್ಜಿತ ಆ್ಯಂಬುಲೆನ್ಸ್ ಸೇವೆ ಒದಗಿಸುವ ಮಹತ್ವದ ಉದ್ದೇಶದಿಂದ ಸರ್ಕಾರವು ಹೊಸದಾಗಿ 350 ಆ್ಯಂಬುಲೆನ್ಸ್‌ಗಳನ್ನು ಖರೀದಿಸುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ತಾಲೂಕು ಮಟ್ಟದಲ್ಲಿ ತುರ್ತು ವೈದ್ಯಕೀಯ ಸೇವೆಗಳನ್ನು ಜನರಿಗೆ ಶೀಘ್ರವಾಗಿ ತಲುಪಿಸಲು ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಪ್ರಸ್ತುತ 450 ಆ್ಯಂಬುಲೆನ್ಸ್‌ಗಳು ಕಾರ್ಯಾಚರಣೆ ನಡೆಸುತ್ತಿವೆ. ಗ್ರಾಮೀಣ ಭಾಗಗಳಿಂದ ರೋಗಿಗಳನ್ನು ಹೊತ್ತ ಆ್ಯಂಬುಲೆನ್ಸ್‌ಗಳು ಕರೆ ಬಂದ 20 ರಿಂದ 25 ನಿಮಿಷಗಳ ಒಳಗೆ ತಾಲೂಕು ಕೇಂದ್ರಗಳನ್ನು ತಲುಪಬೇಕು ಎಂಬ ಕಟ್ಟುನಿಟ್ಟಿನ ನಿಯಮ ಜಾರಿಯಲ್ಲಿದೆ. ನಿಗದಿತ ಕಾಲಮಿತಿಯೊಳಗೆ ಸಮಯ ಪಾಲನೆ ಮಾಡದಿದ್ದರೆ ಆ್ಯಂಬುಲೆನ್ಸ್ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವವರಿಗೆ ₹3,000 ದಂಡ ವಿಧಿಸಲಾಗುವುದು ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿಯಿರುವ ವೈದ್ಯರ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಸಚಿವ ಸಂಪುಟದಲ್ಲಿ 1,000 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಎಂದು ಅವರು ಮಾಹಿತಿ ನೀಡಿದರು.










