ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಭರ್ಜರಿ ಗಿಫ್ಟ್ ನೀಡಲಾಗಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಂಡಿದ್ದು, ರಾಜ್ಯಗಳಿಗೆ ಒಟ್ಟು 1.4 ಲಕ್ಷ ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿದೆ. ಆಯೋಗವು ನೀಡಿದ್ದ ಸಲಹೆ ಮತ್ತು ಶಿಫಾರಸುಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಅವುಗಳನ್ನು ಅಧಿಕೃತವಾಗಿ ಅಂಗೀಕರಿಸಿದೆ. ಇದರ ಅನ್ವಯ, ರಾಜ್ಯಗಳಿಗೆ ಹೆಚ್ಚಿನ ಆರ್ಥಿಕ ನೆರವು ಸಿಗಲಿದೆ.
ಈ ಅನುದಾನವನ್ನು ಪ್ರಮುಖವಾಗಿ ಎರಡು ಕ್ಷೇತ್ರಗಳಿಗರ ವಿನಿಯೋಗಿಸಲು ಸೂಚನೆ ನೀಡಲಾಗಿದೆ. ಹಳ್ಳಿಗಳಲ್ಲಿ ರಸ್ತೆ, ಕುಡಿಯುವ ನೀರು, ನೈರ್ಮಲ್ಯ ಮತ್ತು ಸ್ಥಳೀಯ ಪಂಚಾಯತ್ ಗಳ ಬಲವರ್ಧನೆಗೆ ಹಾಗೂ ನಗರ ಪ್ರದೇಶಗಳಲ್ಲಿ ಮೂಲ ಸೌಕರ್ಯ ಮೇಲ್ದರ್ಜೆಗೆ ಏರಿಸುವುದು, ಸ್ಮಾರ್ಟ್ ಸಿಟಿ ಯೋಜನೆಗಳು ಮತ್ತು ಸಾರಿಗೆ ವ್ಯವಸ್ಥೆಯ ಸುಧಾರಣೆಗೆ ಬಳಸಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೇಂದ್ರದ ಈ ನಿರ್ಧಾರದಿಂದ ರಾಜ್ಯಗಳ ಆರ್ಥಿಕ ಸ್ಥಿತಿ ಸುಧಾರಿಸಲಿದ್ದು, ಸ್ಥಳೀಯ ಮಟ್ಟದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗಲಿದೆ.
ವಿಶೇಷವಾಗಿ ಅಭಿವೃದ್ಧಿ ಪಥದಲ್ಲಿರುವ ರಾಜ್ಯಗಳಿಗೆ ಇದು ಮೈಲಿಗಲ್ಲಾಗಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












