Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1.99 ಕೋಟಿ

---Advertisement---

ದಾವಣಗೆರೆ: ಫೆ18 : ಬರುವ ಆರ್ಥಿಕ ವರ್ಷಕ್ಕೆ ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1,99,80000 ಗಳ ಬಜೆಟ್ ನೀಡಿ ಮಹಾಪೌರರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಚಮನ್‍ಸಾಬ್ ಅನುಮೋದನೆ ನೀಡಿದ್ದಾರೆ ಎಂದು ನಗರ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

 

ಮಂಗಳವಾರ (ಫೆ.18) ರಂದು ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಆಯವ್ಯಯ ಸಭೆಯಲ್ಲಿ ಬಜೆಟ್‍ಗೆ ಅನುಮೋದನೆ ನೀಡಲಾಯಿತು.  ದೇವರಾಜ ಅರಸ್ ಬಡಾವಣೆ ಗ್ರಂಥಾಲಯದ ವಿಸ್ತರಣೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ಮೂಲಕ ನಿರ್ವಹಿಸಲು ಅನುಮೋದನೆ ನೀಡಿದರು.  ಬಡಾವಣೆ ಪೊಲೀಸ್ ಠಾಣೆ ಎದುರಿಗಿರುವ ಸಿಲ್ವರ್ ಜ್ಯುಬಿಲಿ ಶಾಖಾ ಗ್ರಂಥಾಲಯಕ್ಕೆ ಓದುಗರ ಅನುಕೂಲಕ್ಕೆ ಬೋರ್ ವೆಲ್ ಕೊರೆಸಲು ಅನುಮೋದನೆ ನೀಡಿದ್ದಲ್ಲದೇ ಸ್ಥಳದಲ್ಲಿಯೇ ಆಯುಕ್ತರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಪರಿಷತ್ ಕಾರ್ಯದರ್ಶಿ ಶ್ರೀನಿವಾಸ ಎಸ್., ದ.ರಾ.ಮ ವಿಜ್ಞಾನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ರೂಪಶ್ರೀ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಗೋವಿಂದರಾಜು ಎಲ್, ರಾಜನಹಳ್ಳಿ ಸೀತಮ್ಮ ಬಾಲಕೀಯರ ಪ್ರೌಡಶಾಲೆಯ ಮುಖ್ಯೋಪಾದ್ಯಾಯರಾದ  ಮಂಜಪ್ಪ ಎ.ಆರ್ ಹಾಗೂ ಗ್ರಂಥಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment