Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಕ್ಕೂಟಗಳನ್ನು ಒಂದೂಗೂಡಿಸಿದ್ದರಿಂದ ಪ್ರತಿದಿನ 1 ಕೋಟಿ ಲೀ. ಹಾಲು ಉತ್ಪಾದನೆ : ಸಿಎಂ ಸಿದ್ದರಾಮಯ್ಯ

---Advertisement---

ಸುದ್ದಿಒನ್,ಬೆಂಗಳೂರು,ಮೇ.09:ಹಾಲಿನ ಸೊಸೈಟಿಗಳು ಬಂದ ನಂತರ ರೈತರ ಪರಿಸ್ಥಿತಿ ಉತ್ತಮವಾಗಿದ್ದು, ದಿನವೊಂದಕ್ಕೆ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಅತ್ಯಂತ ಲಾಭದಾಯಕವಾದ ಉಪಕಸುಬಾಗಿ ಸಹಕಾರ ಕ್ಷೇತ್ರದಿಂದ ಸಾಧ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕರ ನೂತನ ಆಡಳಿತ ಕಚೇರಿ ‘ಸಹಕಾರ ಸಮೃದ್ಧಿ ಸೌಧ’ವನ್ನು ಇಂದು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ.2023 ರಲ್ಲಿ ಕಟ್ಟಡಕ್ಕೆ ಭೂಮಿ ಪೂಜೆಯನ್ನು ನಾನೇ ನೆರವೇರಿಸಿದ್ದೆ. ಮೂರು ವರ್ಷಗಳಲ್ಲಿ 19.43 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ ಎನ್ನುವುದು ಸಂತಸದ ವಿಚಾರ ಎಂದರು.

ನೆಹರೂ ಅವರು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಒಂದು ಊರಿನಲ್ಲಿ ಒಂದು ಶಾಲೆ, ಪಂಚಾಯತಿ ಮತ್ತು ಸಹಕಾರ ಸಂಘ ಇರಲೇಬೇಕು, ಆಗ ಮಾತ್ರ ಆ ಊರಿನ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದಿದ್ದರು. ಪ್ರಸ್ತುತ ಹಾಲಿನ ಸೊಸೈಟಿಗಳಾದ ನಂತರ ಪ್ರತಿ ಊರಿನಲ್ಲಿ ಇದು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

“ಎಲ್ಲರಿಗಾಗಿ ನಾನು, ನನಗಾಗಿ ಎಲ್ಲರೂ ಎಂಬ ಸಹಕಾರಿ ತತ್ವದಡಿ ರಾಜ್ಯ ಅಭಿವೃದ್ಧಿಯಾಗುತ್ತಿದೆ”. ರೈತರ ಬೆಳವಣಿಗೆಗೆ ಸಹಕಾರ ಇಲಾಖೆ ಕಾರ್ಯ ನಿರ್ವಹಿಸಬೇಕು. 60% ಜನ ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿದ್ದು, ಗ್ರಾಮದ ಜನರಿಗೆ ಅಗತ್ಯ ಸೌಲಭ್ಯಗಳನ್ನು ಸಹಕಾರಿ ಸಂಘಗಳ ಮೂಲಕ ನೀಡಲಾಗುತ್ತಿದೆ ಎಂದರು.

ಹಿಂದೆ ನಾನು ಸಹಕಾರ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳನ್ನು ಹಾಲು ಡೈರಿಯೊಂದಿಗೆ ಸೇರ್ಪಡೆ ಮಾಡಲಾಯಿತು. ಇದರಿಂದ ಹಾಲು ಉತ್ಪಾದನೆ ಹೆಚ್ಚಾಗಲು ಸಾಧ್ಯವಾಯಿತು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now