Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬರ ಪರಿಹಾರಕ್ಕೆ ಕೇಂದ್ರದಿಂದ 1 ರೂಪಾಯಿ ಬಂದಿಲ್ಲ : ಸಿದ್ದರಾಮಯ್ಯ

---Advertisement---

 

ಮಂಗಳೂರು: ರಾಜ್ಯದಲ್ಲಿ ಮುಂಗಾರು – ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಈಗಾಗಲೇ ರಾಜ್ಯದಿಂದ 216 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರದಿಂದ ತಂಡ ಕೂಡ ಬಂದು ಬರಪರಿಶೀಲನೆ ನಡೆಸಿ ಹೋಗಿದ್ದಾರೆ. ಆದರೆ ಅದಾದ ಮೇಲೆ ಯಾವುದೇ ಅಪ್ಡೇಟ್ ಆಗಿಲ್ಲ. ಇದೀಗ ಕೇಂದ್ರದಿಂದ ಬರ ಪರಿಹಾರಕ್ಕೆ ಒಂದು ರೂಪಾಯಿ ಕೂಡ ಬಂದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

 

ಮಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕೆ ಬರಪರಿಹಾರ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯದ ಬರ ಅಧ್ಯಯನಕ್ಕೆ‌ ಕೇಂದ್ರದಿಂದ ತಂಡ ಬಂದಿದೆ. ರಾಜ್ಯದಿಂದಲೂ ಎರಡು ಬಾರಿ‌ ಮನವಿ ಸಲ್ಲಿಸಲಾಗಿದೆ. ರಾಜ್ಯದಲ್ಲಿ ಸುಮಾರು 30 ಸಾವಿರ ಕೋಟಿಯಷ್ಟು ಬೆಳೆನಾಶವಾಗಿದೆ. ಸುಮಾರು 17 ಸಾವಿರ ಕೋಟಿಯಷ್ಟು ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ. ಆದರೆ ಕೇಂದ್ರದಿಂದ ಇಲ್ಲಿಯವರೆಗೂ ಒಂದು ರೂಪಾಯಿ ಬರಪರಿಹಾರ ಬಂದಿಲ್ಲ‌. ಜೊತೆಗೆ ಕೇಂದ್ರ ಸಚಿವರು ಭೇಟಿಗೂ ಅವಕಾಶ ನೀಡಿಲ್ಲ ಎಂದೇ ತಿಳಿಸಿದ್ದಾರೆ.

ಇದೇ ವೇಳೆ‌ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರಿಗೆ ಆಮಿಷ ಒಡ್ಡಿದರ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ 50 ಕೋಟಿ ಹಾಗೂ ಅಧಿಕಾರದ ಆಫರ್ ನೀಡಲಾಗುತ್ತಿದೆ ಎಂಬ ಮಾಹಿತಿ ಇಲ್ಲ. ಗೃಹಸಚಿವರ ಆಮಂತ್ರಣದ ಮೇರೆಗೆ ಭೋಜನಕ್ಕೆ ಹೋಗಿದ್ದಾರೆ ವಿನಃ, ಇದರಲ್ಲಿ ಬೇರೆ ಯಾವುದೇ ರಾಜಕೀಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment