ಮಂಗಳೂರು: ರಾಜ್ಯದಲ್ಲಿ ಮುಂಗಾರು – ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಈಗಾಗಲೇ ರಾಜ್ಯದಿಂದ 216 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರದಿಂದ ತಂಡ ಕೂಡ ಬಂದು ಬರಪರಿಶೀಲನೆ ನಡೆಸಿ ಹೋಗಿದ್ದಾರೆ. ಆದರೆ ಅದಾದ ಮೇಲೆ ಯಾವುದೇ ಅಪ್ಡೇಟ್ ಆಗಿಲ್ಲ. ಇದೀಗ ಕೇಂದ್ರದಿಂದ ಬರ ಪರಿಹಾರಕ್ಕೆ ಒಂದು ರೂಪಾಯಿ ಕೂಡ ಬಂದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕೆ ಬರಪರಿಹಾರ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯದ ಬರ ಅಧ್ಯಯನಕ್ಕೆ ಕೇಂದ್ರದಿಂದ ತಂಡ ಬಂದಿದೆ. ರಾಜ್ಯದಿಂದಲೂ ಎರಡು ಬಾರಿ ಮನವಿ ಸಲ್ಲಿಸಲಾಗಿದೆ. ರಾಜ್ಯದಲ್ಲಿ ಸುಮಾರು 30 ಸಾವಿರ ಕೋಟಿಯಷ್ಟು ಬೆಳೆನಾಶವಾಗಿದೆ. ಸುಮಾರು 17 ಸಾವಿರ ಕೋಟಿಯಷ್ಟು ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ. ಆದರೆ ಕೇಂದ್ರದಿಂದ ಇಲ್ಲಿಯವರೆಗೂ ಒಂದು ರೂಪಾಯಿ ಬರಪರಿಹಾರ ಬಂದಿಲ್ಲ. ಜೊತೆಗೆ ಕೇಂದ್ರ ಸಚಿವರು ಭೇಟಿಗೂ ಅವಕಾಶ ನೀಡಿಲ್ಲ ಎಂದೇ ತಿಳಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರಿಗೆ ಆಮಿಷ ಒಡ್ಡಿದರ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ 50 ಕೋಟಿ ಹಾಗೂ ಅಧಿಕಾರದ ಆಫರ್ ನೀಡಲಾಗುತ್ತಿದೆ ಎಂಬ ಮಾಹಿತಿ ಇಲ್ಲ. ಗೃಹಸಚಿವರ ಆಮಂತ್ರಣದ ಮೇರೆಗೆ ಭೋಜನಕ್ಕೆ ಹೋಗಿದ್ದಾರೆ ವಿನಃ, ಇದರಲ್ಲಿ ಬೇರೆ ಯಾವುದೇ ರಾಜಕೀಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ, ಈ ರಾಶಿಯವರು ಎಷ್ಟೇ ದುಡಿದರು ಹಣಕಾಸಿನ ಸಮಸ್ಯೆ ಬಗೆಹರಿಯುತ್ತಿಲ್ಲ, ಶನಿವಾರದ ರಾಶಿ ಭವಿಷ್ಯ…
ಚಿತ್ರದುರ್ಗ. ಫೆ.21: ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ, ಆದರೆ ಇದುವರೆಗೂ ಇ-ಖಾತಾ ಪಡೆಯದೇ ಇರುವ ಕಟ್ಟಡಗಳ…
ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾ ಆಟಗಾರ ಯಜುವೇಂದ್ರ ಚಹಾಲ್ ಹಾಗೂ ನಟಿ ಧನುಶ್ರೀ ಅವರ ಡಿವೋರ್ಸ್ ವಿಚಾರ ಸಿಕ್ಕಾಪಟ್ಟೆ…
ಮೈಸೂರು: ತಾಯಿ ಚಾಮುಂಡಿ ಬೆಟ್ಟದಲ್ಲಿ ಕಿಡಿಗೇಡಿಗಳಿಂದ ಅವಸ್ಥೆಯಾಗಿದೆ. ಮೊದಲೇ ಬಿಸಿಲಿಗೆ ಒಣಗಿದ ಬೆಟ್ಟಕ್ಕೆ ಕಿಡಿತಾಕಿಸಿದ್ದಾರೆ. ಇದೀಗ ಆ ಕಿಡಿ ಜೋರಾಗಿಯೇ…
ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 21 : ತಾಲ್ಲೂಕಿನ ನಾಯಕನಹಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗೌರವಧನದ ಆಧಾರದ ಮೇಲೆ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 21…