ಬೆಂಗಳೂರು: ಒಮಿಕ್ರಾನ್ ಹೆಚ್ಚಳದ ಭೀತಿ ಬೆನ್ನಲ್ಲೇ ಇದೀಗ ಸರ್ಕಾರದಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಹೆಚ್ಚುತ್ತಿರುವ ಒಮಿಕ್ರಾನ್ ತಡೆಯಲು ಕಠಿಣ ನಿರ್ಧಾರಕ್ಕೆ ಸರ್ಕಾರ ಮುಂದಾಗಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಸಭೆ ನಡೆದಿದೆ. ಈ ಸಭೆ ಬಳಿಕ ಆರೋಗ್ಯ ಸಚಿವ ಸುಧಾಕರ್ ನೈಟ್ ಕರ್ಫ್ಯೂ ಬಗ್ಗೆ ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 28ರಿಂದ ಹತ್ತು ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಹೇರಲಾಗಿದೆ. ಇದರ ಜೊತೆಗೆ ಒಂದಷ್ಟು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಮಾಡುವ ಆಗಿಲ್ಲ. ಹೊಟೇಲ್ ಗಳಲ್ಲಿ ಶೇಕಡ 50 ರಷ್ಟು ಮಾತ್ರ ಆಸನಕ್ಕೆ ಅವಕಾಶ. ಎರಡು ಡೋಸ್ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಂಡಿರಲೇ ಬೇಕು.